

ಬೆಳಗಾವಿ:ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇಡೀ ದೇಶದಲ್ಲಿ ಈ ರೀತಿಯ ವ್ಯವಹಾರ ನಡೆಯುತ್ತಿದೆ. ಬಿಜೆಪಿಯವರು ನಿರಂತರವಾಗಿ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಗಟ್ಟಿಯಾಗಿದ್ದಾರೆ. ಸುಭದ್ರವಾಗಿರುವ ಸರ್ಕಾರವನ್ನು ಯಾರು ಏನೂ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸಚಿವ ಸಂಪುಟ ಪುನರಚನೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ, ಖಾತೆ ಬದಲಾವಣೆ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು.