

ಕನಕಗಿರಿ: ಬೆಳೆಗೆ ನೀರಾಯಿಸಲು ಜಮೀನಿಗೆ ತೆರಳಿದ್ದ ಮಹಿಳೆಗೆ ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಲಕ್ಷ್ಮೀ ರಾಮಪ್ಪ (45) ಮೃತ ಮಹಿಳೆ.
ಬೆಳಗಿನ ಜಾವ 4.30ರ ಸುಮಾರಿಗೆ ನೀರು ಹಾಯಿಸಲು ಜಮೀನಿಗೆ ತೆರಳಿದ್ದಾಗ ಹಾವು ಕಚ್ಚಿದೆ. ಚಿಕಿತ್ಸೆಗಾಗಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತಂದರೂ ಚಿಕಿತ್ಸೆ ಫಲಿಸಲಿಲ್ಲ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.