

ರಾಣೆಬೆನ್ನೂರ: ಶೇಂಗಾ ಬೆಳೆಯಲ್ಲಿ ಬೆಳೆದಿದ್ದ ಕಸ ತೆಗೆಯುತ್ತಿದ್ದ ಸಮಯದಲ್ಲಿ ಹಾವು ಕಚ್ಚಿ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಸುನೀತಮ್ಮ ಅಜ್ಜಪ್ಪ ರೊಡ್ಡನವರ (52) ಮೃತಪಟ್ಟವಳು.
ಇವರು ಜಮೀನಿನಲ್ಲಿ ಬೆಳೆದಿದ್ದ ಶೇಂಗಾ ಬೆಳೆಯಲ್ಲಿ ಕಸ ತೆಗೆಯುತ್ತಿದ್ದ ಸಮಯದಲ್ಲಿ ಹಾವು ಕಚ್ಚಿದೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ನಗರದ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.