ಹೆಬ್ರಿಯಲ್ಲಿ ಹಾವುಗಳ ಮಾಹಿತಿ ಕಾರ್ಯಕ್ರಮ

hbr (2)
Published on

ಹೆಬ್ರಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಐಕ್ಯೂಎಸಿ, ಎನ್ನೆಸ್ಸೆಸ್ಸ್, ಯುವ ರೆಡ್ ಕ್ರಾಸ್ ಹಾಗೂ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಹಾವು ಕಡಿತ ಮತ್ತು ಚಿಕಿತ್ಸಾ ವಿಧಾನಗಳ ಕುರಿತು ಮಾಹಿತಿ ಕಾರ್ಯಕ್ರಮ ಶನಿವಾರ ಆಯೋಜನೆಗೊಂಡಿತು.

ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ಅಧಿಕಾರಿ ಡಾ.ಸಂತೋಷ್‌ಕುಮಾರ್ ಬೈಲೂರು ಮಾತನಾಡಿದರು. ಮಣಿಪಾಲದ ಕೆಎಂಸಿ ತುರ್ತು ವೈದ್ಯಕೀಯ ತಂತ್ರಜ್ಞಾನ ವಿಭಾಗದ ಅವಿನಾಶ್ ಭಟ್ ಮತ್ತು ತಂಡವು ವಿಷಪೂರಿತ ಹಾವುಗಳು ಹಾಗೂ ಅವುಗಳ ಕಡಿತಕ್ಕೆ ಪ್ರಥಮ ಚಿಕಿತ್ಸೆಯ ಕ್ರಮಗಳ ಕುರಿತು ಕಿರುಪ್ರಹಸನ ಮೂಲಕ ಮಾಹಿತಿ ನೀಡಿದರು.

ಪ್ರಾಂಶುಪಾಲ ಡಾ.ವಿದ್ಯಾಧರ ಎಸ್.ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕ ಡಾ.ಗಣೇಶ್ ಕಾಮತ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸುಷ್ಮಾ ರಾವ್, ಯೂತ್ ರೆಡ್ ಕ್ರಾಸ್ ಸಂಚಾಲಕ ಡಾ.ಮನೋಜ್ ಕುಮಾರ್, ಕಾಲೇಜು, ಸಮುದಾಯ ಆರೋಗ್ಯ ಕೇಂದ್ರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರವೀಣ್ ಶೆಟ್ಟಿ ಸ್ವಾಗತಿಸಿದರು. ಸಂಜನಾ ವಂದಿಸಿದರು. ಶಿವಾನಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net