ಸ್ನೇಹ ಸಂಜೀವಿನಿ ಒಕ್ಕೂಟ ಮಹಾಸಭೆ

mahasabhe
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲಾ ಸದಾನಂದ ಪೂಜಾರಿ ಉದ್ಘಾಟಿಸಿದರು.
Published on

ಕೋಟ: ಪಾಂಡೇಶ್ವರ ಸ್ನೇಹ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ ಶುಕ್ರವಾರ ಪಾಂಡೇಶ್ವರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಗ್ರಾಪಂ ಅಧ್ಯಕ್ಷೆ ಸುಶೀಲಾ ಸದಾನಂದ ಪೂಜಾರಿ ಉದ್ಘಾಟಿಸಿದರು.

ಸಾಮಾಜಿಕ ಭದ್ರತ ಯೋಜನೆ ಬಗ್ಗೆ ಸಾಸ್ತಾನ ಕೆನರಾ ಬ್ಯಾಂಕ್ ಅಧಿಕಾರಿ ದೀಪಿಕಾ, ಪಿಎಂಎಫ್‌ಎಂಇ ಯೋಜನೆ ಬಗ್ಗೆ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಘಟಕದ ಜಿಲ್ಲಾ ಸಂಪನ್ಮೂಲ ವ್ಯಕ್ತಿ ವೆಂಕಟೇಶ್, ಆರೋಗ್ಯ ಕಾಳಜಿ ಬಗ್ಗೆ ಸಮುದಾಯ ಆರೋಗ್ಯ ಕೇಂದ್ರದ ಸಿಎಚ್‌ಒ ರಜನಿ, ಆರ್ಥಿಕ ಸಾಕ್ಷರತೆ ಬಗ್ಗೆ ಆರ್ಥಿಕ ಸಾಕ್ಷರತಾ ಸಂಯೋಜಕಿ ಅರ್ಪಿತಾ ಮಾಹಿತಿ ನೀಡಿದರು.

ಸಂಜೀವಿನಿ ಯೋಜನೆ ಕಾರ್ಯಕ್ರಮ ಬಗ್ಗೆ ಸಂಜೀವಿನಿ ತಾಲೂಕು ಸಂಪನ್ಮೂಲ ವ್ಯಕ್ತಿ ಪಂಚಾಯತ್‌ರಾಜ್ ಇಲಾಖೆಯ ರೀತಾ ವಾಹಿತಿ ನೀಡಿದರು. ಒಕ್ಕೂಟ ಅಧ್ಯಕ್ಷೆ ಲೀಲಾವತಿ ಗಂಗಾಧರ್, ಉಪಾಧ್ಯಕ್ಷ ವೈ.ಬಿ.ರಾವೇಂದ್ರ, ಒಕ್ಕೂಟ ಪದಾಧಿಕಾರಿಗಳು, ಸಖಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಸುಶ್ಮಾರಾಜ್ ನಡಾವಳಿ ಮಂಡಿಸಿದರು. ಪದಾಧಿಕಾರಿ ಜ್ಯೋತಿ ಸ್ವಾಗತಿಸಿದರು. ಸುಜಾತಾ ವಂದಿಸಿದರು. ಎಂಬಿಕೆ ಉಷಾ ಗಣೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net