ಅಂಗನವಾಡಿ ಕೇಂದ್ರಕ್ಕೆ ನುಗ್ಗಿದ ಹಾವು

Oplus_131072
Oplus_131072
Published on

ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಂಡಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ನುಗ್ಗಿದ್ದ ಕೇರೆಹಾವನ್ನು ಉರಗತಜ್ಞ ಸ್ನೇಕ್ ನೋಫಲ್ ಶುಕ್ರವಾರ ಸುರಕ್ಷಿತವಾಗಿ ಹಿಡಿದು ಮಾಲ್ದಾರೆ ಅರಣ್ಯಕ್ಕೆ ಬಿಟ್ಟಿದ್ದಾರೆ. ಅಂಗನವಾಡಿ ಕೇಂದ್ರದ ಅಡುಗೆ ಸಹಾಯಕಿಯು ಕೇಂದ್ರದ ಒಳಗೆ ಬಂದಾಗ ಹಾವನ್ನು ಕಂಡು ಗ್ರಾಮಸ್ಥರಿಗೆ ವಿಚಾರ ತಿಳಿಸಿದ್ದಾರೆ. ತಕ್ಷಣವೇ ಮಾಲ್ದಾರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಮೀರ್ ಅವರು ಸ್ನೇಕ್ ನೋಫಲ್ ಅವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ನೋಫಲ್, ಹಾವನ್ನು ಹಿಡಿದು ಮಕ್ಕಳು ಹಾಗೂ ಸಾರ್ವಜನಿಕರ ಆತಂಕವನ್ನು ದೂರ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net