ಮಾತನಾಡದೆ ಅದೆಷ್ಟೋ ಭಾಷೆಗಳು ಮರೆಯಾಗಿವೆ

blm
Published on

ಕಾರ್ಕಳ: ಕುಂದಾಪ್ರ ಕನ್ನಡವು ಸುಂದರ ಕನ್ನಡ ಭಾಷೆಯ ಅವಿಭಾಜ್ಯ ಅಂಗ. ಇತರ ಪ್ರಾದೇಶಿಕ ಆಡು ಕನ್ನಡದಂತೆ ಕುಂದಾಪ್ರ ಕನ್ನಡ ಇದೆ. ಆದರೆ ಇದರ ಜೋರು, ರಾಪು, ಜಾಪು, ತನಿ, ಒಯ್ಲು, ಹೊಯ್ಲು ಮತ್ತು ರಭಸ ಅತ್ಯಂತ ವಿಶಿಷ್ಟ. ಇಂದು ವಾತನಾಡದೆ ಅದೆಷ್ಟೋ ಭಾಷೆಗಳು ಕಳೆದು ಹೋಗಿವೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕಾಧ್ಯಕ್ಷ, ಸಾಹಿತಿ ಐರೋಡಿ ಶಂಕರನಾರಾಯಣ ಹೆಬ್ಬಾರ್ ಹೇಳಿದರು.

ಕಾರ್ಕಳ ತಾಲೂಕು ಕಸಾಪ ವತಿಯಿಂದ ಹೋಟೆಲ್ ಪ್ರಕಾಶ ಸಂಭ್ರಮ ಸಭಾಂಗಣದಲ್ಲಿ ಗುರುವಾರ ಜರುಗಿದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜ್ಞಾನಸುಧಾ ವಿದ್ಯಾಸಂಸ್ಥೆಯ ಸಂಸ್ಥಾಪಕ ಸುಧಾಕರ ಶೆಟ್ಟಿ ವಾತನಾಡಿ ಕಾರ್ಕಳದಲ್ಲಿ ಕುಂದಗನ್ನಡದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿರುವುದು ಭಾಷಾ ಸಾಮರಸ್ಯಕ್ಕೊಂದು ವಾದರಿ ಎಂದರು.

ಉದ್ಯಮಿ ರಾಮಕೃಷ್ಣ ಆಚಾರ್ ಮಾತನಾಡಿ, ಆಡುಭಾಷೆ ನಮ್ಮ ನೈಜ ಭಾವನೆಗಳನ್ನು ಪೋಷಿಸಿ ಬದುಕನ್ನು ಸಮೃದ್ಧಗೊಳಿಸುತ್ತದೆ ಎಂದರು. ತಾಲೂಕು ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಗುಣಪಾಲ ಕಡಂಬ, ಕಾರ್ಕಳ ರೋಟರಿ ಅಧ್ಯಕ್ಷ ನವೀನಚಂದ್ರ ಶೆಟ್ಟಿ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಮಾತನಾಡಿದರು. ಶಂಕರನಾರಾಯಣ ಹೆಬ್ಬಾರ್ ಅವರನ್ನು ಕುಂದಗನ್ನಡ ಸೇವೆಗಾಗಿ ಸನ್ಮಾನಿಸಲಾಯಿತು.

ನಿತ್ಯಾನಂದ ಪೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ಭಾಷಣ ವಾಡಿದರು. ಧಾರಣಿ ಉಪಾಧ್ಯ ಕುಂದಗನ್ನಡದಲ್ಲಿ ಪ್ರಾರ್ಥಿಸಿದರು. ಪ್ರಕಾಶ್ ನಾಯ್ಕ ವಂದಿಸಿದರು. ಗೀತಾ ನಿರೂಪಿಸಿದರು. ನರಸಿಂಹಮೂರ್ತಿ, ಶಿವಸುಬ್ರಹ್ಮಣ್ಯ ಭಟ್, ಗಣೇಶ್ ಜಾಲ್ಸೂರು ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net