ಸೋ.ಪೇಟೆ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಸ್ತಿತ್ವಕ್ಕೆ

15spt1
ಸೋಮವಾರಪೇಟೆಯಲ್ಲಿ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಕಚೇರಿಯನ್ನು ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ದೀಪಕ್, ಆದರ್ಶ್, ಅಬ್ದುಲ್ ರಜಾಕ್, ಶ್ರೀನಿಧಿ, ನವೀನ್. ನ.ಲ.ವಿಜಯ್, ರವಿ, ಜಿ.ಎಂ.ಹೂವಯ್ಯ ಇದ್ದರು.
Published on

ಸೋಮವಾರಪೇಟೆ: ತಾಲೂಕಿನ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಲು ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದೆ ಎಂದು ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ ಹೇಳಿದರು.

ಆಸ್ಪತ್ರೆ ರಸ್ತೆಯಲ್ಲಿರುವ ಸಮಿತಿಯ ಕಚೇರಿಯನ್ನು ಭಾನುವಾರ ಉದ್ಘಾಟಿಸಿ ನಂತರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ರೈತರ ಸಮಸ್ಯೆಗಳು ಸಾಕಷ್ಟಿವೆ. ಅಕಾಲಿಕ ಮಳೆಯಿಂದ ಕಾಫಿ ಫಸಲು ನಷ್ಟವಾಗಿದೆ. ಸರ್ಕಾರದಿಂದ ಸೂಕ್ತ ಪರಿಹಾರ ಸಿಗಬೇಕು. ಹೋರಾಟ ಮಾಡದೆ ಸೌಲಭ್ಯ ಪಡೆದುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ಇದೆ. ಹೋರಾಟ ಮಾಡಲೇಬೇಕಾದ ಅನಿವಾರ್ಯತೆ ಇದೆ ಎಂದರು.

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯ ಬಗ್ಗೆ ಬೆಳಕು ಚೆಲ್ಲಬೇಕಾಗಿದೆ. ಜನಪ್ರತಿನಿಧಿಗಳು ಹಾಗೂ ಸರ್ಕಾರಕ್ಕೆ ಮನವಿ ಮಾಡಿಕೊಂಡು ಅನುದಾನ ತರುವ ಕೆಲಸವನ್ನು ಸಮಿತಿ ವತಿಯಿಂದ ಮಾಡಬೇಕಾಗಿದೆ. ರೈತಪರ ಹೋರಾಟವನ್ನು ಮಾಡಬೇಕಿದ್ದು, ಸದಸ್ಯರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿ, ಶಾಲಾ ಮಕ್ಕಳ ಬೇಡಿಕೆಗಳನ್ನು ಈಡೇರಿಸುವುದು, ರಕ್ತದಾನ ಶಿಬಿರ, ಅರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಉಪಾಧ್ಯಕ್ಷ ಕೆ.ಎನ್.ದೀಪಕ್, ಕಾರ್ಯದರ್ಶಿ ಆದರ್ಶ್, ಖಜಾಂಚಿ ಅಬ್ದುಲ್ ರಜಾಕ್, ಕಾನೂನು ಸಲಹೆಗಾರರಾದ ಶ್ರೀನಿಧಿ ಲಿಂಗಪ್ಪ, ನವೀನ್ ಪ್ರಮುಖರಾದ ಜಿ.ಎಂ.ಹೂವಯ್ಯ, ರವಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net