

ಕೆ.ಆರ್.ಸಾಗರ: ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಮಂಗಳವಾರ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, 14 ಹಾಗೂ 15ನೇ ಹಣಕಾಸು ಆಯೋಗ ಮತ್ತು ಪ್ರಧಾನ ಮಂತ್ರಿ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಆಯೋಜಿಸಲಾಗಿತ್ತು.
ಗ್ರಾಪಂ ಅಧ್ಯಕ್ಷೆ ಶೃತಿ ಶ್ರೀನಿವಾಸ್ ಗಿಡಕ್ಕೆ ನೀರು ಹಾಕುವ ಮೂಲಕ ಸಭೆಗೆ ಚಾಲನೆ ನೀಡಿದರು.
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, 14 ಹಾಗೂ 15 ನೇ ಹಣಕಾಸು ಆಯೋಗ ಮತ್ತು ಪ್ರಧಾನ ಮಂತ್ರಿ ಯೋಜನೆಯಡಿ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳು ಹಾಗೂ ಲೋಪಗಳ ಬಗ್ಗೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಶ್ರೀರಂಗಪಟ್ಟಣ ತಾಲೂಕು ವ್ಯವಸ್ಥಾಪಕ ಅಶೋಕ್ ಮಾಹಿತಿ ನೀಡಿದರು.
ತೋಟಗಾರಿಕೆ ಇಲಾಖೆ ನಿರ್ದೇಶಕಿ ಸೌಮ್ಯಾ ತೋಟಗಾರಿಕೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ಗ್ರಾಪಂ ಉಪಾಧ್ಯಕ್ಷ ರವಿಶಂಕರೇಗೌಡ, ಪಿಡಿಒ ಬಸವರಾಜು, ಪಶುಸಂಗೋಪನೆ ವೈದ್ಯ ರಘುಪತಿ, ಗ್ರಾಪಂ ಕಾರ್ಯಕದರ್ಶಿ ರಘು ಇತರರು ಉಪಸ್ಥಿತರಿದ್ದರು.