ಸಾಮಾಜಿಕ ನ್ಯಾಯ ನೀಡಿದ ಧೀಮಂತ

CHN ARASU
Published on

ಚನ್ನಗಿರಿ: ರಾಜಕಾರಣದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿ, ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ನೀಡಿದ ಧೀಮಂತ ನಾಯಕ ದೇವರಾಜ ಅರಸು ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಸಿ. ಸಿದ್ದಪ್ಪ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಭಾನುವಾರ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಅವರ ಜಯಂತಿ ಉದ್ಘಾಟಿಸಿ ಮಾತನಾಡಿದರು.

ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಜನರ ಕಲ್ಯಾಣಕ್ಕಾಗಿ ಭೂಸುಧಾರಣಾ ಕಾಯ್ದೆ ಜಾರಿಗೆ ತಂದು ತಳಸಮುದಾಯದವರಿಗೆ ಭೂಮಿ ಮಾಲೀಕತ್ವ ಕೊಡಿಸಿದರು. ಹಿಂದುಳಿದ ಸಮುದಾಯಗಳು ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮಾಡಿದರು.

ಅವರ ತತ್ವಾದರ್ಶಗಳು ಇಂದಿನ ಯುವ ಪೀಳಿಗೆಯಲ್ಲಿ ಬರಬೇಕಾಗಿದೆ ಎಂದರು.

ತಹಸೀಲ್ದಾರ್ ಪಿ.ಎಸ್. ಯರ‌್ರಿಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ಭಾರತದ ಮೊದಲ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದರು.

ದೇವರಾಜ ಅರಸು ಅವರು 1972ರಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಿ ಹಿಂದುಳಿದ ವರ್ಗಗಳ ಪ್ರತಿನಿಧಿಯಾಗಿ ರಾಜ್ಯದಲ್ಲಿ ಅಧಿಕಾರ ನಡೆಸಿದ ಧೀಮಂತ ನಾಯಕರಾದರು ಎಂದು ಬಣ್ಣಿಸಿದರು.

ಹಿಂದುಳಿದ ವರ್ಗಗಳ ವಿಸ್ತೀರ್ಣಾಧಿಕಾರಿ ಶಾಂತಕುಮಾರ್, ರವಿಕುಮಾರ್ ಅಥರ್ಗ, ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಆರಾಧ್ಯ, ಹಿರಿಯ ಆರೋಗ್ಯ ನಿರೀಕ್ಷಕ ಶಿವರುದ್ರಪ್ಪ, ಪಶು ವೈದ್ಯಾಧಿಕಾರಿ ಡಾ.ಅಶೋಕ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net