

ತಲ್ಲೂರ: ಮಹಾತ್ಮಾಗಾಂಧಿ ರಾಷ್ಟ್ರಿಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮದಲ್ಲಿ ಚೆಕ್ ಡ್ಯಾಂ, ಬದುವು ನಿರ್ಮಾಣ ಕಾಮಗಾರಿ ಇತ್ತೀಚೆಗೆ ಕೈಗೊಂಡಿದ್ದು, ಕಾರ್ಮಿಕರು ಸಾಮಾಜಿಕ ಅಂತರ ಕಾಪಾಡಿಕೊಂಡು ಕೆಲಸ ಮಾಡಬೇಕು ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ
ಎಂ.ಆರ್. ಹಾರುಗೊಪ್ಪ ಹೇಳಿದರು.
ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ವಿಶ್ವ ಕಾರ್ಮಿಕರ ದಿನ ಆಚರಿಸಿ, ಕಾರ್ಮಿಕರಿಗೆ ಸ್ಯಾನಿಟೈಸರ್, ಮಾಸ್ಕ್, ಸೋಪು ಒಳಗೊಂಡ ಕಿಟ್ ವಿತರಿಸಿ ಮಾತನಾಡಿದರು. ಕರೊನಾ ವೈರಸ್ ಕುರಿತು ಭಯಪಡದೇ ಜಾಗ್ರತರಾಗಬೇಕು. ಅನಗತ್ಯವಾಗಿ ಯಾರೂ ಹೊರಗಡೆ ಸಂಚರಿಸಬಾರದು. ತೀರಾ ಅಗತ್ಯವಿದ್ದರೆ ಮಾಸ್ಕ್ ಧರಿಸಿಯೇ ಸಂಚರಿಸಬೇಕು. ಕಾರ್ಮಿಕರು ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು ಎಂದರು. ಗ್ರಾಪಂ ಅಧ್ಯಕ್ಷ ಎಸ್.ಡಿ. ಚಪ್ಟಿ, ಉಪಾಧ್ಯಕ್ಷ ಬಾಬುಗೌಡ ಅಣ್ಣಿಗೇರಿ, ಸದಸ್ಯ ಬಸವರಾಜ ಪೂಜೇರ, ಕಾರ್ಯದರ್ಶಿ ಡಿ.ವೈ. ಆಡಿನ, ರಾಜಶೇಖರ್ ಅಣ್ಣಿಗೇರಿ, ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ, ಕಾರ್ಮಿಕರು ಇದ್ದರು.