ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸಿ

10ravig2-C-Web
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಶುಕ್ರವಾರ ಆನ್‌ಲೈನ್ ಕಾರ್ಯಾಗಾರ ನಡೆಸಿ ಕೋವಿಡ್-19 ಕುರಿತು ಜಾಗೃತಿ ಮೂಡಿಸಲಾಯಿತು.
Published on

ಬೆಳಗಾವಿ: ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟಲು ರಾಷ್ಟ್ರೀಯ ಸ್ವಯಂ ಸೇವಕರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಶುಕ್ರವಾರ ಆನ್‌ಲೈನ್ ಕಾರ್ಯಾಗಾರದ ಮೂಲಕ ತಮ್ಮನ್ನು ರಕ್ಷಿಸಿಕೊಂಡು ಇತರರಿಗೂ ತಿಳಿವಳಿಕೆ ನೀಡುವಂತೆ ಜಾಗೃತಿ ಮೂಡಿಸಲಾಯಿತು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲ್ಲ ಕಾರ್ಯಕ್ರಮಾಧಿಕಾರಿಗಳು ಹಾಗೂ ಸ್ವಯಂ ಸೇವಕರು ಸಾಮಾಜಿಕ ಅಂತರ ಕಾಯ್ದುಕೊಂಡು ತಂಡೋಪತಂಡವಾಗಿ ಈಗಾಗಲೇ ಕೋವಿಡ್-19 ತಡೆಗಟ್ಟಲು ಜಾಗೃತಿ ಮೂಡಿಸುತ್ತಿದ್ದು, ತುರ್ತು ಪರಿಸ್ಥಿತಿಯಲ್ಲಿ ಸಮಾಜದ ಒಳತಿಗಾಗಿ ಸೇವೆ ಸಲ್ಲಿಸಬೇಕೆಂದು ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನೆ ಕೇಂದ್ರ ಸರ್ಕಾರದ ಪ್ರಾದೇಶಿಕ ನಿರ್ದೇಶಕ ಪ್ರೊ.ಖಾದ್ರಿ ನರಸಿಂಹಯ್ಯ ಮಾತನಾಡಿ, ಆರೋಗ್ಯ ಇಲಾಖೆ ನೀಡುವ ಸಲಹೆಗಳನ್ನು ಎಲ್ಲರೂ ತಪ್ಪದೆ ಪಾಲಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಸೇವೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು.

ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕ ಡಾ. ಬಿ.ಎಸ್. ನಾವಿ ಅಧ್ಯಕ್ಷತೆ ವಹಿಸಿದ್ದರು. ಸಂಪರ್ಕಾಧಿಕಾರಿ ಡಾ.ಗಣನಾಥಶೆಟ್ಟಿ, ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಅನುಷ್ಠಾನ ಅಧಿಕಾರಿ ಡಾ. ಪೂರ್ಣಿಮಾ ಜೋಗಿ, ಡಾ. ಎಸ್.ಒ. ಹಲಸಗಿ ಇತರರು ಪಾಲ್ಗೊಂಡಿದ್ದರು. ವಿಜಯಪುರ ಜಿಲ್ಲಾ ನೋಡಲ್ ಅಧಿಕಾರಿ ಡಾ. ಎಚ್.ಎಂ. ಸಜ್ಜಾದೆ ಸ್ವಾಗತಿಸಿದರು. ಬಂಜಾರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಗಂಗಾಧರ ಅಗಸರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net