ಸಾಮಾಜಿಕ ನ್ಯಾಯ ನಾಯಕತ್ವ ತರಬೇತಿ ಕಾರ್ಯಾಗಾರ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಕರ್ನಾಟಕ ವಿಶ್ವ ವಿದ್ಯಾಲಯದ ಮಾನಸೋಲ್ಲಾಸ ಸಭಾಂಗಣದಲ್ಲಿ ಅ. 25, 26ರಂದು ಸಾಮಾಜಿಕ ನ್ಯಾಯ ನಾಯಕತ್ವ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಡಾ. ಬಾಬು ಜಗಜೀವನರಾಮ ಸಂಶೋಧನಾ ಸಂಸ್ಥೆ, ಸಾಮಾಜಿಕ ಪ್ರತ್ಯೇಕತೆ ಮತ್ತು ಒಳಗೊಳ್ಳುವಿಕೆ ನೀತಿಯ ಅಧ್ಯಯನ ಕೇಂದ್ರ, ರಾಷ್ಟ್ರೀಯ ಕಾನೂನು ಶಾಲೆ, ಕವಿವಿಯ ಡಾ. ಬಾಬು ಜಗಜೀವನರಾಮ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿರುವ ಕಾರ್ಯಾಗಾರದಲ್ಲಿ ಆರ್ಥಿಕ ತಜ್ಞ ಎನ್​.ಸಿ. ಮುನಿಯಪ್ಪ, ಡಾ. ಎ.ಚನ್ನಪ್ಪ, ನ್ಯಾಯಾಧೀಶ ಪರಶುರಾಮ ದೊಡ್ಡಮನಿ, ಟಿ. ಶುಭ, ಡಾ. ಸಿ.ಕೃಷ್ಣಮೂರ್ತಿ, ಇತರರು ಆಗಮಿಸಲಿದ್ದಾರೆ. ಕವಿವಿ ಕುಲಪತಿ ಪ್ರೊ. ಬಿ.ಎಂ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಾಗಾರದಲ್ಲಿ ಯುವ ವಕೀಲರು, ಸಾಮಾಜಿಕ ಕಾರ್ಯಕರ್ತರು ಮತ್ತು ಯುವ ಸಮುದಾಯದ ಸುಮಾರು 125 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುವುದು. ತರಬೇತಿಯ ಮೌಲ್ಯಗಳನ್ನು ಅವರು ತಮ್ಮ ವೃತ್ತಿ ಮತ್ತು ಜೀವನದಲ್ಲಿ ಅಳವಡಿಸಿಕೊಂಡು ಸೌಹಾರ್ದ ಸಮಾಜ ನಿರ್ಮಾಣದಲ್ಲಿ ನೆರವಾಗುವುದೇ ನಮ್ಮ ಉದ್ದೇಶ ಎಂದು ಪ್ರಕಟಣೆ ತಿಳಿಸಿದೆ. .

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net