ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರದ ಬಗ್ಗೆ ದೂರು

30-DVD-6 (Roopa Nayak)
Published on

ದೇವದುರ್ಗ: ಸಾಮಾಜಿಕ ಜಾಲತಾಣದಲ್ಲಿ ನನ್ನ ಹಾಗೂ ಕುಟುಂಬದ ಬಗ್ಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ತೇಜೋವಧೆ ಮಾಡುತ್ತಿದ್ದಾರೆ. ಈ ಕುರಿತು ಕಾನೂನುಕ್ರಮ ವಹಿಸಲು ಪೊಲೀಸರಿಗೆ ದೂರು ನೀಡಿರುವುದಾಗಿ ಪಕ್ಷೇತರ ಅಭ್ಯರ್ಥಿ ರೂಪಾ ಶ್ರೀನಿವಾಸ್ ನಾಯಕ ಹೇಳಿದರು.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಬಳಿಕ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಸೋಲುವ ಭೀತಿಯಿಂದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನನ್ನ ವಿರುದ್ಧ ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಆರೋಪಿಸಿದರು. ಇದು ಒಬ್ಬ ಅಭ್ಯರ್ಥಿಗಷ್ಟೇ ಅಲ್ಲ ಮಹಿಳೆಯರಿಗೆ ಮಾಡುವ ಅಪಮಾನವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನಡೆದಿರುವ ಅಪಪ್ರಚಾರಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು. ಪ್ರಮುಖರಾದ ಚಾಮುಂಡಿ, ಅನ್ನಪೂರ್ಣ, ಅಯ್ಯನಗೌಡ, ಶಿವನಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net