ಚುನಾವಣೆಗಳಲ್ಲಿ ಜಾಲತಾಣಗಳ ಪಾತ್ರ ಮುಖ್ಯ

BJP TENGINAKAYI NEW NEW
Published on

ಹುಬ್ಬಳ್ಳಿ : ಚುನಾವಣೆಗಳಲ್ಲಿ ಸಾಮಾಜಿಕ ಜಾಲತಾಣಗಳ ಪಾತ್ರ ಮುಖ್ಯವಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲೆ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲೆಗಳ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮ ಶಂಕನಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಂಡಿದ್ದರು ಎಂದರು.

ಕೇಂದ್ರ ಸರ್ಕಾರದ ಕಳೆದ 9 ವರ್ಷಗಳ ಜನಪರ ಕಾರ್ಯಕ್ರಮಗಳನ್ನು ಜಾಲತಾಣಗಳ ಮೂಲಕ ಜನರಿಗೆ ತಲುಪಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಖಂಡಿಸುವುದು ಸೇರಿದಂತೆ ಅವರ ಜನ ವಿರೋಧಿ ನೀತಿಯನ್ನು ತರಾಟೆಗೆ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಪ್ರಾಸ್ತಾವಿಕವಾಗಿ ಮಾತನಾಡಿದರು

ರಾಜ್ಯ ಸಾಮಾಜಿಕ ಜಾಲತಾಣಗಳ ಸಂಚಾಲಕ ವಿಕಾಸ ಪುತ್ತೂರ ಮಾತನಾಡಿ, ಹುಬ್ಬಳ್ಳಿಯಲ್ಲಿ ಅಕ್ಟೋಬರ್​ನಲ್ಲಿ ಬೃಹತ್ ಕಾರ್ಯಾಗಾರ ನಡೆಯಲಿದೆ. ಕೇಂದ್ರ ಹಾಗೂ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಗ್ರಾಮಾಂತರ ಅಧ್ಯಕ್ಷ ಬಸವರಾಜ ಕುಂದಗೋಳಮಠ, ನರೇಂದ್ರ ಮೂರ್ತಿ, ರಾಘವೇಂದ್ರ ನಾಗೂರ, ಪ್ರಶಾಂತ ಜಾಧವ, ವಿಜಯಾನಂದ ಶೆಟ್ಟಿ, ಪ್ರಭು ನವಲಗುಂದಮಠ, ಬಸವರಾಜ ಗರಗ, ಸತ್ಯನಾರಾಯಣ ಗಂಗತಡೆ, ಸಿದ್ದು ಮಠದ, ಜಿಲ್ಲಾ ವಕ್ತಾರ ರವಿ ನಾಯಕ, ಗುರು ಪಾಟೀಲ, ಸಿದ್ದು ಕೆರೂರ ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net