

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಭಾವನೆಗೆ ಧಕ್ಕೆ ತರುವ ದುರುದ್ದೇಶದೊಂದಿಗೆ ಪ್ರಚೋದನಾತ್ಮಕ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಗರ ಸೈಬರ್ ಪೊಲೀಸ್ ಠಾಣೆಯಲ್ಲಿ 5 ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಪ್ರವೀಣ್ ಮತ್ತು ಸುರತ್ಕಲ್‌ನಲ್ಲಿ ಾಜಿಯಾ ಹತ್ಯೆಯ ಬಳಿಕ ಕೆಲವು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸಂದೇಶ ಹಾಗೂ ಪ್ರತಿಕ್ರಿಯೆ ಹಾಕಿದ್ದದು, ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆಕ್ಷೇಪಾರ್ಹ ಬರಹಗಳು: ಸಾಮಾಜಿಕ ಜಾಲತಾಣದಲ್ಲಿ ‘ಕೋಮು ಸಂಘರ್ಷ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂಬುದಾಗಿ ರಾಜ್ಯ ಗುಪ್ತಚರ ದಳ ಮಾಹಿತಿ’ ಎಂಬುದಾಗಿ ಸುಳ್ಳು ಸಂದೇಶ, ಪ್ರವೀಣ್ ಕೊಲೆಗೆ ಪ್ರತೀಕಾರವಾಗಿ ಕೊಲೆಗೆ ಕರೆ ನೀಡಿರುವ ಪೋಸ್ಟ್. ಾಜಿಲ್ ಕೊಲೆಗೆ ಪ್ರತೀಕಾರವಾಗಿ ಕೊಲೆ ಸಂದೇಶ, ನಿರ್ದಿಷ್ಟ ಜಾತಿ ಮತ್ತು ಸಮುದಾಯವನ್ನು ಗುರಿಯಾಗಿಸಿಕೊಂಡು ಹತ್ಯೆಗೆ ಕರೆ ನೀಡುವ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಬಗ್ಗೆ ಪ್ರಕರಣ ದಾಖಲಾಗಿದೆ. ಸಮಗ್ರ ತನಿಖೆ ನಡೆಸಿ ಆಕ್ಷೇಪಾರ್ಹ ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಪೊಲೀಸ್ ಇಲಾಖೆ ನಿರ್ಧರಿಸಿದೆ.
ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣಾ ಘಟಕದ ಸುಮಾರು 10 ಮಂದಿ ಸಿಬ್ಬಂದಿ ನಿರಂತರವಾಗಿ ಊಹಾಪೋಹಗಳು, ಆಕ್ಷೇಪಾರ್ಹ ವಿಷಯಗಳು, ಸುಳ್ಳು ಸುದ್ದಿಗಳನ್ನು ರವಾನೆ ಮಾಡುತ್ತಿರುವವರ ಮೇಲೆ ನಿಗಾ ಇರಿಸಿದ್ದಾರೆ. ಅಂತಹ ಅಪಪ್ರಚಾರ ಮಾಡುತ್ತಿರುವವ ಮೊಬೈಲ್ ಸಂಖ್ಯೆಗಳನ್ನು ಕಂಡು ಹಿಡಿಯಲಾಗುತ್ತಿದೆ. ಸದ್ಯ ಅಧಿಕಾರಿಗಳು ಅಹಿತಕರ ಘಟನೆಗಳ ಆರೋಪಿಗಳ ಪತ್ತೆ ಕಾರ್ಯದಲ್ಲಿ ನಿರತರಾಗಿದ್ದು, ಅದು ಆದಾಕ್ಷಣ ಪತ್ತೆಹಚ್ಚಲಾದ ನಂಬರ್‌ಗಳ ವಿರುದ್ಧ ಕ್ರಮ ವಹಿಸಲಾಗುವುದು. ಈ ರೀತಿ ಸುಳ್ಳು ಸುದ್ದಿಗಳನ್ನು ಹಂಚುತ್ತಿರುವವರನ್ನು ಅವರ ಮೊಬೈಲ್ ಸಂಖ್ಯೆಯ ಆಧಾರದಲ್ಲಿ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.