

ಉಡುಪಿ: ಮಂಗಳೂರು ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಬೈಂದೂರಿನ ವ್ಯಕ್ತಿಯೊಬ್ಬರ ಮೇಲೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಕ್ಷ್ಮೀಕಾಂತ ಬೈಂದೂರು ಆರೋಪಿ. ಈತ ಫೇಸ್ ಬುಕ್ ಖಾತೆಯಲ್ಲಿ ಪ್ರವೀಣ್ ನೆಟ್ಟಾರು ಫೋಟೋ ಬಳಸಿ ಪ್ರಚೋದನಾಕಾರಿಯಾಗಿ ಪೋಸ್ಟ್ ಹಾಕಿದ್ದ. ಹೀಗಾಗಿ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.