ಸಾಮಾಜಿಕ ಜಾಲತಾಣ ಬಲಪಡಿಸಲಿ

web1
ಗೋಕಾಕ ನಗರದಲ್ಲಿ ಹಮ್ಮಿಕೊಂಡಿದ್ದ ಶಂಖನಾದ ಅಭಿಯಾನ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಮಹಾಂತೇಶ ವಕ್ಕುಂದ, ಮಹಾದೇವ ಶೆಕ್ಕಿ, ನಾಗಪ್ಪ ಶೇಖರಗೋಳ, ಜ್ಯೋತಿ ಕೋಲ್ಹಾರ ಇತರರು ಇದ್ದರು.
Published on

ಗೋಕಾಕ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರ ಬಳಿ ತಲುಪಿಸಲು ಸಾಮಾಜಿಕ ಜಾಲತಾಣವನ್ನು ಇನ್ನಷ್ಟು ಬಲಪಡಿಸುವಂತೆ ಸಾಮಾಜಿಕ ಜಾಲತಾಣದ ಸಂಚಾಲಕ ಮಹಾಂತೇಶ ವಕ್ಕುಂದ ಹೇಳಿದರು.

ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅರಬಾವಿ ಮಂಡಲ ಮಟ್ಟದ ಶಂಖನಾದ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕರ್ತರ ಶ್ರಮದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತೊಂದು ಅವಧಿಗೆ ಪ್ರಧಾನಿಯಾಗಲಿದ್ದಾರೆ ಎಂದರು.

ಅರಬಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ಅಧ್ಯಕ್ಷತೆ ವಹಿಸಿದ್ದರು. ಮುಖಂಡ ನಾಗಪ್ಪ ಶೇಖರಗೋಳ, ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ನಿತಿನ ಚೌಗಲೆ, ಎಸ್‌ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಯಲ್ಲೇಶ ಕೋಲಕಾರ, ಸಹ ಸಂಚಾಲಕಿ ಜ್ಯೋತಿ ಕೋಲ್ಹಾರ, ಬಸವರಾಜ ಇಟ್ನಾಳ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪರಸಪ್ಪ ಬಬಲಿ, ಮಹಾಂತೇಶ ಕುಡಚಿ, ಮಂಡಲ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ, ಎಸ್‌ಟಿ ಮೋರ್ಚಾ ಅಧ್ಯಕ್ಷ ಯಲ್ಲಾಲಿಂಗ ವಾಳದ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇಕ್ಬಾಲ್ ಸರ್ಕಾವಸ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net