ಸಾಮಾಜಿಕ ಪಿಡುಗು ತೊಲಗಿಸಲು ಸುಶಿಕ್ಷಿತರಾಗಿ

H. Awareness about the burning issues in Veerapur
ಎಚ್. ವೀರಾಪುರದಲ್ಲಿ ಹಮ್ಮಿಕೊಂಡಿದ್ದ ಜ್ವಲಂತ ಸಮಸ್ಯೆಗಳ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಸಮನ್ವಯ ಅಧಿಕಾರಿ ರೇಖಾ ಮಾತನಾಡಿದರು.
Published on

ಕುರುಗೋಡು: ಪ್ರತಿಯೊಬ್ಬರೂ ಆರೋಗ್ಯ, ಶಿಕ್ಷಣ, ಪರಿಸರ, ಸ್ವಚ್ಛತೆ ಮತ್ತು ಸರ್ಕಾರಿ ಸೌಲಭ್ಯಗಳ ಬಗ್ಗೆ ಅರಿತು ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಸಮನ್ವಯ ಅಧಿಕಾರಿ ರೇಖಾ ಹೇಳಿದರು.

ಎಚ್.ವೀರಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬನ್ನಿಮಂಕಾಳಿ ಜ್ಞಾನ ವಿಕಾಸ ಕೇಂದ್ರದಿಂದ ಹಮ್ಮಿಕೊಂಡಿದ್ದ ಜ್ವಲಂತ ಸಮಸ್ಯೆಗಳ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ, ವರದಕ್ಷಿಣೆಯಂತಹ ಸಮಸ್ಯೆಗಳು ಸಾಮಾಜಿಕ ಪಿಡುಗಾಗಿ ಕಾಡುತ್ತಿದ್ದು, ಸುಶಿಕ್ಷಿತರಾಗುವ ಮೂಲಕ ತಡೆಯಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ಶಿಕ್ಷಕ ಎಸ್.ರಾಮಪ್ಪ ಮಾತನಾಡಿ, ಮಹಿಳೆಯರ ಹಿತದೃಷ್ಟಿಯಿಂದ ಸರ್ಕಾರ ಹಲವು ಯೋಜನೆಗಳನ್ನುಜಾರಿಗೆ ತಂದಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಸಿಎಸಿಯ ವಿ.ಎಲ್.ಅಶ್ವಿನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net