ಸಮಾಜ ಸುಧಾರಣೆ ಮೂಲಕ ಕ್ರಾಂತಿ

11 Arakera Photo 01
Published on

ಅರಕೇರಾ: ರಡ್ಡಿ ಕುಲಕ್ಕೆ ಬಡತನವಿಲ್ಲ ಎಂದು ಹೇಳುವ ಮೂಲಕ ಇಡೀ ರಡ್ಡಿ ಸಮುದಾಯಕ್ಕೆ ಹೇಮರಡ್ಡಿ ಮಲ್ಲಮ್ಮ ಶಕ್ತಿ ತುಂಬಿದ್ದು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಮರಡ್ಡಿ ಮಲ್ಲಮ್ಮ ಯುವ ಜಾಗೃತಿ ವೇದಿಕೆ ಗ್ರಾಮ ಘಟಕದ ಅಧ್ಯಕ್ಷ ವೆಂಕಟೇಶ ಪಾಟೀಲ್ ಹುನಗುಂದ ಬಾಡ ಹೇಳಿದರು.

ಕಾಕರಗಲ್ ಗ್ರಾಮದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು. ದಾನ, ದಾಸೋಹ ಹಾಗೂ ನಿಸ್ವಾರ್ಥ ಭಕ್ತಿಗೆ ಹೆಸರಾದ ಹೇಮರಡ್ಡಿ ಮಲ್ಲಮ್ಮ ಮೋಕ್ಷದ ಮಾರ್ಗ ತೋರಿಸಿದ್ದಾರೆ. ಸಮಾಜ ಸುಧಾರಣೆಯಲ್ಲಿ ಕ್ರಾಂತಿ ಮಾಡಿದ ಅವರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು. ಮಲ್ಲಮ್ಮ ಅವರ ವಿಚಾರ ಮತ್ತು ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ಆದರ್ಶಪ್ರಾಯರಾಗಬೇಕು ಎಂದರು.
ಹೇಮರಡ್ಡಿ ಮಲ್ಲಮ್ಮ ಯುವ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ರವಿಚಂದ್ರ ಪಾಟೀಲ್ ಕುಪ್ಪಿ, ಸುನೀಲ್ ಕುಮಾರ್ ಮುಕ್ಕಲ್, ಬಸನಗೌಡ ವಡಗೇರಿ, ಶಿವಕುಮಾರ ತಳ್ಳಳ್ಳಿ, ಪ್ರವೀಣ ಕುಪ್ಪಿ ಕಾಕರಗಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net