ಸಾಮಾಜಿಕ ಜವಾಬ್ದಾರಿ ಹೊಂದಿದ್ದ ಟಾಟಾ

Kudligi Tata
ಕೂಡ್ಲಿಗಿಯ ಮದಕರಿ ವೃತ್ತದಲ್ಲಿ ಗುರುವಾರ ಉದ್ಯಮಿ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಚಿವ ಜಮೀರ್ ಅಹ್ಮದ್ ಖಾನ್, ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿಪಂ ಸಿಇಒ ನೋಂಗ್ಜಾಯರ್ ಮೊಹಮ್ಮದ್ ಅಕ್ರಂ ಶಾ, ಎಸ್ಪಿ ಶ್ರೀ ಹರಿಬಾಬು, ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ ಇದ್ದರು.
Published on

ಕೂಡ್ಲಿಗಿ: ರತನ್ ಟಾಟಾ ಕೇವಲ ಉದ್ಯಮಿ ಆಗಿರಲಿಲ್ಲ. ಅವರು ಕಂಪನಿಯೊಂದಿಗೆ ದೇಶಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

ಪಟ್ಟಣದ ಮದಕರಿ ವೃತ್ತದಲ್ಲಿ ಗುರುವಾರ ಏರ್ಪಡಿಸಿದ್ದ ರತನ್ ಟಾಟಾಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ವ್ಯಾಪಾರದೊಂದಿಗೆ ಸಾಮಾಜಿಕ ಜವಾಬ್ದಾರಿ ಹೊಂದಿದ್ದರು. ಅವರ ಜೀವನವು ಹೋರಾಟ, ಸಮರ್ಪಣೆ ಮತ್ತು ಹೊಸತನದ ಸಂಕೇತವಾಗಿತ್ತು. ರತನ್ ಟಾಟಾ ಅವರ ವಿಭಿನ್ನ ಆಲೋಚನೆ, ಹೊಸ ಆವಿಷ್ಕಾರಗಳಿಂದ ಟಾಟಾ ಗ್ರೂಪ್ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಿತು.

ಒಂದಕ್ಕೆ ಸೀಮಿತವಾಗದೆ ಹಲವು ಕ್ಷೇತ್ರಗಳಿಗೆ ವಿಸ್ತರಿಸಿಕೊಂಡಿತು. ರತನ್ ಟಾಟಾ ಅವರು ತಮ್ಮ ದುಡಿಮೆಯ ಬಹುಪಾಲನ್ನು ಸಾಮಾಜಿಕ ಸೇವೆಗೆ ನೀಡುತ್ತಿದ್ದರು. ದೇಶದ ಸಂಕಷ್ಟದ ಸಮಯದಲ್ಲಿ ಸಾಕಷ್ಟು ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದರು ಎಂದು ಸ್ಮರಿಸಿದರು.

ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿಪಂ ಸಿಇಒ ನೋಂಗ್ಜಾಯರ್ ಮೊಹಮ್ಮದ್ ಅಕ್ರಂ ಶಾ, ಎಸ್ಪಿ ಶ್ರೀ ಹರಿಬಾಬು, ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಉಪಾಧ್ಯಕ್ಷೆ ಲೀಲಾವತಿ ಪ್ರಭಾಕರ, ಗ್ರೇಡ್ 2 ತಹಸೀಲ್ದಾರ್ ಎಂ.ವಿ.ನೇತ್ರಾವತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನ ಗೌಡ, ಉದಯ ಜನ್ನು, ನಾಗಮಣಿ ಜಿಂಕಾಲ್, ರಾಘವೇಂದ್ರ, ಗುಂಡಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net