ಜಯಕರ್ನಾಟಕ ಜನಪರ ವೇದಿಕೆಯಿಂದ ಸಮಾಜ ಸೇವೆ

9-kollegal-1,
Published on

ಕೊಳ್ಳೇಗಾಲ: ಜಯಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕ ವತಿಯಿಂದ 4ನೇ ವಾರ್ಷಿಕೋತ್ಸವದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿತ್ತು.


ಪಟ್ಟಣದ ಬಸ್ತೀಪುರ ರಸ್ತೆಯಲ್ಲಿ ಗಿಡ ನೆಟ್ಟ ಬಳಿಕ ವೇದಿಕೆ ರಾಜ್ಯ ಉಪಾಧ್ಯಕ್ಷ ಕೆ.ಎನ್.ಜಗದೀಶ್ ಮಾತನಾಡಿ, ಜಯ ಕರ್ನಾಟಕ ಜನಪರ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಗುಣರಂಜನ್ ಶೆಟ್ಟಿ ಹಾಗೂ ಅಧ್ಯಕ್ಷ ಶ್ರೀನಿವಾಸ್ ನೇತೃತ್ವದಲ್ಲಿ ಎಲ್ಲ ಜಿಲ್ಲೆಗಳಲ್ಲಿಯೂ ಜನಪರ ವೇದಿಕೆಯನ್ನು ಸಂಘಟನೆ ಮಾಡಲಾಗುತ್ತಿದೆ ಎಂದರು.


ಕಳೆದ ನಾಲ್ಕು ವರ್ಷದಿಂದ ಅನೇಕ ಜನಪರ ಸೇವೆ ಮಾಡುತ್ತಾ ಬಂದಿದೆ. ವಾರ್ಷಿಕೋತ್ಸವದ ಅಂಗವಾಗಿ ಇಂದು ಗಿಡ ನೆಡುವ ಕಾರ್ಯಕ್ರಮ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ನಮ್ಮ ವೇದಿಕೆ ಮೂಲಕ ಸಮಾಜ ಸೇವೆ ಮಾಡುವ ಗುರಿ ಹೊಂದಿರುವುದಾಗಿ ತಿಳಿಸಿದರು.


ಜಯಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದ ಮುಖಂಡರಾದ ದೇವಿಕಾ, ತಾಲೂಕು ಪ್ರಭುಸ್ವಾಮಿ, ಭಾರತಿ, ಶೋಭಾ, ನೀಲಾವತಿ, ತುಳಸಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net