

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಪ್ರಥಮ ಶ್ರೇಣೆಯಲ್ಲಿ ಉತ್ತೀರ್ಣಾರದ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್:https://swdservices.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.
ವಿವರಗಳಿಗೆ: ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್.ಕರಿಯಪ್ಪ ರಸ್ತೆ, ಕನಕಪುರ ಮುಖ್ಯ ರಸ್ತೆ, ಬನಶಂಕರಿ, ಬೆಂಗಳೂರು-70. ದೂ : 080-26711096 ಸಂಪರ್ಕಿಸಬಹುದು.