ಸಮರ್ಪಕ ಚರಂಡಿ ಇಲ್ಲದೇ ದುರ್ನಾತ

11mnd1
Published on

ಮುಂಡಗೋಡ: ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಪಕ್ಕದಲ್ಲಿ ಸಮರ್ಪಕವಾದ ಚರಂಡಿ ಇಲ್ಲದೆ ತ್ಯಾಜ್ಯ ಹಾಗೂ ಕೊಳಚೆ ನೀರು ನಿಂತು ದುರ್ನಾತ ಬೀರುತ್ತಿದೆ.

ಕೋಟ್ಯಂತರ ರೂ. ವ್ಯಯಿಸಿ ಸಮಾಜ ಕಲ್ಯಾಣ ಇಲಾಖೆಯ ಸುಸಜ್ಜಿತ ಕಟ್ಟಡ ನಿರ್ವಿುಸಲಾಗಿದೆ. ಈ ಕಟ್ಟಡದ ಎಡಭಾಗದಲ್ಲಿ ಚರಂಡಿಯಲ್ಲಿ ಕೊಳಚೆ ನೀರು ಹರಿಯುತ್ತಿದೆ. ಆದರೆ, ಚರಂಡಿ ಕಾಮಗಾರಿ ನೂರು ಮೀಟರ್​ನಷ್ಟು ಕಾಮಗಾರಿ ಬಾಕಿ ಉಳಿದಿದೆ. ಇದರಿಂದಾಗಿ ಕಚೇರಿ ಪಕ್ಕದಲ್ಲಿ ಕೊಳಚೆ ನೀರು ತುಂಬಿ ನಿಂತಿದೆ. ಇದರಿಂದ ಸೊಳ್ಳೆಗಳು ಉತ್ಪತ್ತಿಯಾಗುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಿದೆ. ಕಚೇರಿ ಪಕ್ಕದ ಚರಂಡಿಯಲ್ಲಿ ಕೊಳಚೆ ನೀರು ನಿಂತಿದ್ದರೂ ಸಮಾಜ ಕಲ್ಯಾಣ ಇಲಾಖೆಯವರು ಅದನ್ನು ಸ್ವಚ್ಛ ಮಾಡಿಸದೆ ಹಾಗೆ ಬಿಟ್ಟಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣ ಪಂಚಾಯಿತಿಯವರಿಗೆ ತಿಳಿಸಿ ಕಚೇರಿ ಪಕ್ಕದಲ್ಲಿ ಕೊಳಚೆಯ ನೀರು ನಿಲ್ಲದಂತೆ ಕ್ರಮ ವಹಿಸಬೇಕಿದ್ದ ಅಧಿಕಾರಿ ಹಾಗೂ ಸಿಬ್ಬಂದಿ ಜಾಣ ಕುರುಡತನ ಪ್ರದರ್ಶಿಸುತ್ತಿದ್ದಾರೆ. ಇನ್ನಾದರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಕಚೇರಿಯ ಪಕ್ಕದ ಚರಂಡಿಯಲ್ಲಿ ಕೊಳಚೆ ನೀರು ನಿಲ್ಲದಂತೆ ಕ್ರಮ ವಹಿಸುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net