ಧರ್ಮಸ್ಥಳ ಸಂಘದಿಂದ ಸಮಾಜಮುಖಿ ಕಾರ್ಯ

ಧರ್ಮಸ್ಥಳ ಸಂಘದಿಂದ ಸಮಾಜಮುಖಿ ಕಾರ್ಯ
Published on

ಮದ್ದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನೂರಾರು ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ ಎಂದು ಸಂಸ್ಥೆಯ ಯೋಜನಾಧಿಕಾರಿ ಎಂ.ಎ.ಹಾಲಪ್ಪ ಹೇಳಿದರು.

ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾದ ಜ್ಞಾನವಿಕಾಸ ಕಾರ್ಯಕ್ರಮದ 2025- 26 ನೇ ಸಾಲಿನ ಸಂಯೋಜಕಿಯರ ಕ್ರಿಯಾ ಯೋಜನೆ ಸಭೆ ಉದ್ಘಾಟಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೂ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕೆಂದರು.

ಮೈಸೂರು ಪ್ರಾದೇಶಿಕ ಕಚೇರಿಯ ಜ್ಞಾನವಿಕಾಸ ಯೋಜನಾಧಿಕಾರಿ ಮೂಕಾಂಬಿಕಾ ಮಾತನಾಡಿ, ಆರೋಗ್ಯ, ನೈರ್ಮಲ್ಯ, ಶಿಕ್ಷಣ, ಮಹಿಳೆಯರ ಹಕ್ಕು ಮತ್ತು ಕಾನೂನು, ಸರ್ಕಾರಿ ಸೌಲಭ್ಯಗಳು ಮತ್ತು ವಾತ್ಸಲ್ಯ ಕಾರ್ಯಕ್ರಮ ಇತ್ಯಾದಿ ವಿಚಾರಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕೊಡಿಸುವಂತೆ ಸಭೆಯಲ್ಲಿದ್ದ ಸಂಯೋಜಕಿಯರಿಗೆ ತಿಳಿಸಿದರು.

ತಾಲೂಕಿನ ಜ್ಞಾನ ವಿಕಾಸ ಸಮನ್ವಯಾಧಿಕಾರಿ ತೇಜಾವತಿ, ರಕ್ಷಿತಾ, ಪ್ರಭಾ ಹಾಗೂ ಸೇವಾ ಪ್ರತಿನಿಧಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net