ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಸಮಾಜಮುಖಿ ಕಾರ್ಯ

FotoJet (2)
Published on

ಶಾಸಕ ಕೆ.ಎನ್​.ರಾಜಣ್ಣ ಬಣ್ಣನೆ | ಶ್ರೀ ವರಲಕ್ಷಿ$್ಮ ಪೂಜೆ, ಸುಜ್ಞಾನ ನಿಧಿ ಶಿಷ್ಯವೇತನ ವಿತರಣೆ

 ಮಧುಗಿರಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂ ಜನರ ಜೀವನಮಟ್ಟ ಸುಧಾರಿಸಲು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಕೆ.ಎನ್​.ರಾಜಣ್ಣ ತಿಳಿಸಿದರು.

ಪಟ್ಟಣದ ಕುಂಚಿಟಿಗ ಒಕ್ಕಲಿಗ ಸಮುದಾಯ ಭವನದಲ್ಲಿ ಬುಧವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್​ನಿಂದ ಹಮ್ಮಿಕೊಂಡಿದ್ದ ಶ್ರೀ ವರಲಕ್ಷಿ$್ಮ ಪೂಜೆ ಮತ್ತು ಸುಜ್ಞಾನ ನಿಧಿ ಶಿಷ್ಯವೇತನ ವಿತರಣೆ ಹಾಗೂ ಸರ್ಕಾರಿ ಶಾಲೆಗಳಿಗೆ ಬೆಂಚ್​ ಡೆಸ್ಕ್​ಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಜನತೆಗೆ ಬಹಳಷ್ಟು ಗೌರವವಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂ ಮಕ್ಕಳ ಶಿಕ್ಷಣಕ್ಕೆ ಕೊಡುಗೆ, ದೇವಸ್ಥಾನಗಳ ಪುನರುಜ್ಜೀವನ, ಶಾಲೆಗಳ ದುರಸ್ತಿ, ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸುವುದು ಸೇರಿದಂತೆ ಅನೇಕ ಜನಪರ ಕಾರ್ಯಕ್ರಮ ಜಾರಿಗೊಳಿಸಿದ್ದು, ಈಗ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸುಜ್ಞಾನನಿಧಿ ಶಿಷ್ಯವೇತನ ಕಾರ್ಯಕ್ರಮ ಜಾರಿಗೆ ತಂದಿದ್ದು, ಇದೊಂದು ಪುಣ್ಯದ ಕೆಲಸ ಎಂದರು.

ವಿದ್ಯೆ ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ. ಪಾಲಕರು ಮಕ್ಕಳಿಗೆ ಆಸ್ತಿ ಸಂಪಾದನೆ ಮಾಡದೆ ಗುಣಮಟ್ಟದ ಶಿಕ್ಷಣ ದೊರಕಿಸಿಕೊಟ್ಟು ಮಕ್ಕಳನ್ನೇ ಸಮಾಜದ ಆಸ್ತಿಯನ್ನಾಗಿ ಮಾಡಬೇಕು. ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ಬಹಳಷ್ಟು ಅನುಕೂಲವಾಗಲಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ತಗ್ಗಿಹಳ್ಳಿ ರಾಮಕೃಷ್ಣಾಶ್ರಮದ ಶ್ರೀ ರಮಾನಂದ ಚೈತನ್ಯ ಸ್ವಾಮೀಜಿ ಮಾತನಾಡಿ, ಶಿಕ್ಷಣದ ಜತೆಗೆ ಮಕ್ಕಳಿಗೆ ಸಂಸ್ಕಾರ ನೀಡಿ. ಧರ್ಮವನ್ನು ಆಚರಣೆ ಮಾಡುವುದನ್ನು ಕಲಿಸಬೇಕು. ಮನುಷ್ಯರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳಿ. ಮನೆಯಲ್ಲಿ ಲಕ್ಷ್ಮೀ ನೆಲೆಸಬೇಕೆಂದರೆ ಮನೆ, ಮನಸ್ಸು ಉತ್ತಮವಾಗಿರಬೇಕು. ಕಷ್ಟಪಟ್ಟು ದುಡಿದಾಗ ಮಾತ್ರ ಯಶಸ್ಸು ಸಿಗಲಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗಿದೆ ಎಂದು ತಿಳಿಸಿ, ಮಧುಗಿರಿಗೆ ವಿದ್ಯುತ್​ ಚಿತಾಗಾರ ಮಂಜೂರು ಮಾಡಿಸಿಕೊಡಬೇಕು ಎಂದು ಶಾಸಕರಿಗೆ ಮನವಿ ಮಾಡಿದರು.

ಕೆ.ಎನ್​.ರಾಜಣ್ಣ ಕ್ಷೇತ್ರದ ಅಭಿವೃದ್ಧಿಗೆ ಬಹಳಷ್ಟು ಯೋಜನೆ ಜಾರಿಗೆ ತಂದಿದ್ದಾರೆ. ಇವರ ಅವಧಿಯಲ್ಲಿ ಮಧುಗಿರಿಯ ಸಂಪೂರ್ಣ ಚಿತ್ರಣವನ್ನೇ ಬದಲಾಯಿಸಿದ್ದಾರೆ. ಇಂತಹ ಅಹಿಂದ ನಾಯಕರಿಂದ ಸಚಿವ ಸ್ಥಾನ ಕಿತ್ತುಕೊಂಡಿರುವುದು ಸರಿಯಲ್ಲ. ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು ಎಂದು ಶ್ರೀ ರಮಾನಂದ ಚೈತನ್ಯ ಸ್ವಾಮೀಜಿ ಒತ್ತಾಯಿಸಿದರು.

ಪುರಸಭೆ ಅಧ್ಯಕ್ಷ ಮತ್ತು ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಲಾಲಾಪೇಟೆ ಮಂಜುನಾಥ್​ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರಾದೇಶಿಕ ನಿರ್ದೇಶಕ ಎಂ.ಸೀನಪ್ಪ, ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಸೀಲ್ದಾರ್​ ಶ್ರೀನಿವಾಸ್​, ತಾಪಂ ಇಒ ಲಕ್ಷ$್ಮಣ್​, ಧಾರ್ಮಿಕ ಮುಖಂಡ ಎಂ.ಜಿ.ಶ್ರೀನಿವಾಸ್​ ಮೂರ್ತಿ, ಚೇತನ ಆಂಗ್ಲ ಶಾಲೆಯ ಕಾರ್ಯದರ್ಶಿ ತುಂಗೋಟಿ ರಾಮಣ್ಣ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಟಿ.ಸಿ.ಮಂಜುನಾಥ್​, ರವಿಶಂಕರ್​, ಸಹನಾ ನಾಗೇಶ್​, ಲತಾ ಪ್ರದಿಪ್​, ವರಲಕ್ಷಿ$್ಮ, ಪೂಜಾ, ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ವೀರ ಚಿಕ್ಕಯ್ಯ, ಪುರಸಭೆ ಸದಸ್ಯ ಮಂಜುನಾಥ್​ ಆಚಾರ್​ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net