

ಗೋಣಿಕೊಪ್ಪಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದು ನಿವೃತ್ತ ಸೈನಿಕ ಮನೆಯಪಂಡ ಮೇಜರ್ ಬೋಪಣ್ಣ ಶ್ಲಾಘನೆ ವ್ಯಕ್ತಪಡಿಸಿದರು.
ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್, ಬೆಳ್ತಂಗಡಿಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ, ಸಮುದಾಯ ಆರೋಗ್ಯ ಕೇಂದ್ರ, ಆರಕ್ಷಕ ಠಾಣೆ, ನವಜೀವನ ಸಮಿತಿ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಸ್ಥಳೀಯ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿನ ಶ್ರೀ ಉಮಾಮಹೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 900ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಇಂತಹ ಸಾಮಾಜಿಕ ಕಾರ್ಯಕ್ರಮಗಳಿಂದ ಸಮಾಜ ಅಭಿವೃದ್ಧಿ ಹೊಂದುವುದರ ಜತೆಗೆ ಬದಲಾವಣೆಯಾಗಲಿದೆ ಎಂದರು.
ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್‌ನ ನಿಕಟಪೂರ್ವ ಅಧ್ಯಕ್ಷ ಅರುಣ್ ಬಾನಂಗಡ ಮಾತನಾಡಿ, ಕರ್ನಾಟಕ ಜನಜಾಗೃತಿ ವೇದಿಕೆ ಮೂಲಕ ದುಶ್ಚಟ ಮುಕ್ತ ಸಮಾಜಕ್ಕಾಗಿ ಶ್ರಮಿಸಲಾಗುತ್ತಿದೆ. ಅದರಲ್ಲೂ ಬಹು ನಿರೀಕ್ಷಿತ ಮದ್ಯವರ್ಜನ ಶಿಬಿರ ಮಹತ್ವದ್ದಾಗಿದ್ದು, ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾತನಾಡಿದರು. ಗೋಣಿಕೊಪ್ಪಲು ಗ್ರಾಪಂ ಅಧ್ಯಕ್ಷ ಕುಲ್ಲಚಂಡ ಎಸ್.ಪ್ರಮೋದ್ ಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಣಿಕೊಪ್ಪಲು ಸ್ವಾತಂತ್ರೃ ಹೋರಾಟಗಾರರ ಭವನದ ಸಂಚಾಲಕ ಕೊಳ್ಳಿಮಾಡ ಅಜಿತ್‌ಅಯ್ಯಪ್ಪ, ನಿವೃತ್ತ ಪ್ರಾಂಶುಪಾಲ ಪ್ರೊ.ಇಟ್ಟೀರ ಕೆ.ಬಿದ್ದಪ್ಪ, ಗೋಣಿಕೊಪ್ಪಲು ಕೊಡವ ಸಮಾಜ ಕಾರ್ಯದರ್ಶಿ ಸಿ.ಡಿ.ಮಾದಪ್ಪ, ಉದ್ಯಮಿ ಎಂ.ಜಿ.ಮೋಹನ್, ಗೋಣಿಕೊಪ್ಪಲು ದಲಿತ ಸಂಘದ ಅಧ್ಯಕ್ಷ ಟಿ.ಎಂ.ಗೋವಿಂದಪ್ಪ, ಉಮಾಮಹೇಶ್ವರಿ ದೇವಸ್ಥಾನ ಸಮಿತಿ ಸದಸ್ಯ ಉತ್ತಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ವಿರಾಜಪೇಟೆ ತಾಲೂಕು ಯೋಜನಾಧಿಕಾರಿ ಬಿ. ಸಿ.ದಿನೇಶ್, ಗೋಣಿಕೊಪ್ಪಲು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಎಂ.ಮಂಜುಳಾ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕೋಶಾಧಿಕಾರಿ ಪಿ.ವಿ ಸುನೀತಾ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿಬಿರಾಧಿಕಾರಿ ನಂದಕುಮಾರ್, ಆರೋಗ್ಯ ಸಹಾಯಕಿ ನೇತ್ರಾವತಿ, ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ವಿಭಾಗದ ಮೇಲ್ವಿಚಾರಕ ನಿತೇಶ್, ಗೋಣಿಕೊಪ್ಪಲು ವಲಯ ಮೇಲ್ವಿಚಾರಕ ನಿತಿನ್ ಇತರರಿದ್ದರು.