ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜಮುಖಿ ಕಾರ್ಯ

sid (3)
Published on

ವಿಜಯವಾಣಿ ಸುದ್ದಿಜಾಲ ಅಮಾಸೆಬೈಲು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನತೆಗೆ ಪ್ರಯೋಜನವಾಗುವ ನಿಟ್ಟಿನಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು ಸದುಪಯೋಗಿಸಬೇಕು ಎಂದು ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಆರ್.ನವೀನ್‌ಚಂದ್ರ ಶೆಟ್ಟಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ, ಅಮಾಸೆಬೈಲು ವಲಯ ಮಹಿಳಾ ಜ್ಞಾನವಿಕಾಸ, ಉಡುಪಿ ನೇತ್ರ ಜ್ಯೋತಿ ಚಾರಿಟೆಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ, ಹಾಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ, ಅಮಾಸೆಬೈಲು ಉಪ ಕೇಂದ್ರ ಹಾಗೂ ಆಯುರ್ವೇದಿಕ್ ಚಿಕಿತ್ಸಾ ಕೇಂದ್ರ ಇವುಗಳ ಸಹಯೋಗದೊಂದಿಗೆ ಅಮಾಸೆಬೈಲು ಹಾಲು ಉತ್ಪಾದಕರ ಸಹಕಾರಿ ಸಂದ ಸಭಾಂಗಣದಲ್ಲಿ ನಡೆದ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರಚಿಕಿತ್ಸೆ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅವಾಸೆಬೈಲು ವಲಯಾಧ್ಯಕ್ಷ ಭೋಜರಾಜ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಪ್ರಸಾದ್ ನೇತ್ರಾಲಯದ ನೇತ್ರ ತಜ್ಞೆ ಡಾ.ಮೇನಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ಮೋಹನ್‌ದಾಸ್, ಅಮಾಸೆಬೈಲು ಆರ್ಯುವೇದ ಆಸ್ಪತ್ರೆಯ ಡಾ.ಹೇಮಲತಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು ಯೋಜನಾಧಿಕಾರಿ ನಾರಾಯಣ ಪಾಲನ್, ಪ್ರಮುಖರಾದ ಮನೋಜ್, ಲಕ್ಷ್ಮಣ ಪೂಜಾರಿ, ಕೃಷ್ಣ ಪೂಜಾರಿ, ಸಂದೀಪ್, ಯುಶೋದಾ ಶೆಡ್ತಿ, ಕವಿತಾ, ಲೋಹಿತ್ ಮತ್ತಿತರರು ಉಪಸ್ಥಿತರಿದ್ದರು. ಜ್ಞಾನವಿಕಾಸ ಸಮನ್ವಧಿಕಾರಿ ಕವಿತಾ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಗೀತಾ ವಂದಿಸಿದರು. ಮೇಲ್ವಿಚಾರಕ ಸಂದೀಪ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net