

ಮಂಗಳೂರು: ನಗರದ ಸ್ಮಾರ್ಟ್‌ಸಿಟಿ ಕಾಮಗಾರಿ ನಡೆಯುತ್ತಿರುವ ರಾವ್ ಆ್ಯಂಡ್ ರಾವ್ ಸರ್ಕಲ್‌ನ ರಸ್ತೆಯಲ್ಲಿ ಉಂಟಾಗಿದ್ದ ಹೊಂಡವನ್ನು ಅಲ್ಲಿ ಕರ್ತವ್ಯದಲ್ಲಿದ್ದ ಪಾಂಡೇಶ್ವರ ಸಂಚಾರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಶರಣಪ್ಪ ಅವರು ಸಾರ್ವಜನಿಕರ ಸಹಕಾರದಲ್ಲಿ ಕಲ್ಲು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.
ಇಲ್ಲಿ ಹಲವು ಸಮಯದಿಂದ ಹೊಂಡ ಉಂಟಾಗಿದ್ದು, ವಾಹನ ಸವಾರರು, ಪಾದಚಾರಿಗಳು ಸಂಚರಿಸಲು ತೊಂದರೆ ಅನುಭವಿಸುತ್ತಿದ್ದರು. ಇದನ್ನು ಗಮನಿಸಿದ ಅವರು ಸ್ಥಳೀಯ ಆಟೋ ಚಾಲಕರು, ಸಾರ್ವಜನಿಕರ ಜತೆ ಸೇರಿ ಮುಚ್ಚಿದ್ದಾರೆ. ಅವರ ಸಾಮಾಜಿಕ ಸೇವೆಗೆ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಹಾಗೂ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.