ದೇಶ ಚಿಂತನೆಯೊಂದಿಗೆ ಸಮಾಜಮುಖಿ ಕಾರ್ಯ

byn
Published on

ಬೈಂದೂರು: ಸ್ವಾತಂತ್ರೃ ಬಂದು 78 ವರ್ಷವಾಗಿದೆ. ಈ ಸ್ವಾತಂತ್ರೃವನ್ನು ಹೇಗೆ ಉಳಿಸಿಕೊಳ್ಳಬೇಕೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘವು ಸ್ವಾತಂತ್ರೃ ಬಂದ ನಂತರ ದೇಶದ ಜನತೆಗೆ ತಿಳಿಸುತ್ತ ಬಂದಿದೆ. ಭಾರತದ ಪ್ರತಿಯೊಬ್ಬ ಪ್ರಜೆ ದೇಶ ಮೊದಲು ಎಂಬ ಚಿಂತನೆಯೊಂದಿಗೆ ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಬೈಂದೂರು ಬಿಜೆಪಿ ಮಂಡಲ ಉಪ್ಪುಂದ ಕಾರ್ಯಾಲಯದಲ್ಲಿ 79ನೇ ಸ್ವಾತಂತ್ರೊೃೀತ್ಸವದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ., ಪಕ್ಷದ ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಬಿಜೆಪಿ ಮಂಡಲ ಅಧ್ಯಕ್ಷರು ಎಲ್ಲಾ ಕಾರ್ಯಕರ್ತರಿಗೆ, ಸಾರ್ವಜನಿಕರಿಗೆ ಶುಭಾಶಯ ಕೋರಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಕರಣ್ ಪೂಜಾರಿ ಸ್ವಾಗತಿಸಿದರು. ನೂತನವಾಗಿ ಆಯ್ಕೆಯಾದ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಸ್ರೆ ಗೋಪಾಲ್ ಪೂಜಾರಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net