ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.26 ಕೋಟಿ ರೂ. ಲಾಭ

society
Published on

ಕುಶಾಲನಗರ:

ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2024-25ನೇ ಸಾಲಿನಲ್ಲಿ 259.30 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸಿದ್ದು 1.26 ಕೋಟಿ ರೂ. ನಿವ್ವಳ ಲಾಭಗಳಿಸಿ ಎಂದು ಸಂಘದ ಅಧ್ಯಕ್ಷ ಟಿ.ಆರ್. ಶರವಣಕುಮಾರ್ ತಿಳಿಸಿದ್ದಾರೆ.

ಈ ಸಂಘ 104 ನೇ ವರ್ಷದಲ್ಲಿ ಮುನ್ನಡೆಯುತ್ತಿದ್ದು ಸತತವಾಗಿ 8 ವರ್ಷಗಳಿಂದ ಕೋಟಿಗೂ ಮೀರಿ ಲಾಭಗಳಿಸುತ್ತಿದೆ. ಸದಸ್ಯರಿಗೆ ಕೆ.ಸಿ.ಸಿ ಸಾಲ 105.06 ಲಕ್ಷ ರೂ. ಪಾವತಿಸಿದ್ದು, ಇನ್ನೂ ಕೆಲವು ಸದಸ್ಯರಿಗೆ ಸಾಲ ವಿತರಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಈ ಸಾಲಿನಲ್ಲಿ ವಿವಿಧ ಸಾಲಗಳ ರೂಪದಲ್ಲಿ 50 ಕೋಟಿ ರೂ. ಸಾಲ ವಿತರಿಸಲಾಗಿದೆ. ಸಂಘದ ಸ್ವಂತ ಬಂಡವಾಳದಿAದ 40 ಲಕ್ಷ ರೂ.ಗಳನ್ನು ಸ್ವಸಹಾಯ ಗುಂಪುಗಳಿಗೆ ಸಾಲ ಕೊಡಲಾಗಿದೆ ಎಂದು ಗುರುವಾರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸದಸ್ಯರಿಗೆ ಕಳೆದ 13 ವರ್ಷಗಳಿಂದ ಶೇ.16 ರಿಂದ ಶೇ.25 ಡಿವಿಡೆಂಡ್ ನೀಡುತ್ತಿದ್ದು, ಸಂಘವು ಸದಸ್ಯರ ಅನುಕೂಲಕೋಸ್ಕರ ತ್ಯಾಗರಾಜ ರಸ್ತೆಯಲ್ಲಿರುವ 8.60 ಸೆಂಟ್ಸ್ ನಿವೇಶನದಲ್ಲಿ ನಿರ್ಮಿಸಿದ ಕಟ್ಟಡದಲ್ಲಿ ಸುಲಲಿತವಾಗಿ ಸದಸ್ಯರ ಸೇವೆಗೆ ಅನುಕೂಲವಾಗುವಂತೆ ವ್ಯವಹಾರ ನಡೆಸಲಾಗುತ್ತಿದೆ.

ಈ ಸಾಲಿನಲ್ಲಿ ಸದಸ್ಯರಿಗೆ ಶೇ. 10 ಡಿವಿಡೆಂಡ್ ನೀಡಲು ತೀರ್ಮಾನಿಸಲಾಗಿದೆ. ವನಿತಾ ಬಂಧು ಮತ್ತು ಜನಚೈತನ್ಯ ಎಂಬ ಜಂಟಿ ಭಾದ್ಯತಾ ಗುಂಪು ಸಾಲ ಯೋಜನೆ ಯಶಸ್ವಿಯಾಗಿದ್ದು ಈ ಯೋಜನೆಯಡಿಯಲ್ಲಿ ಒಟ್ಟು 887 ಮಹಿಳೆಯರಿಗೆ ಈ ಸಾಲಿನಲ್ಲಿ 5.83 ಕೋಟಿ ರೂ. ಸಾಲ ವಿತರಿಸಲಾಗಿದೆ. ಪ್ರತಿ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರ ಮಕ್ಕಳ ಪೈಕಿ 10ನೇ ತರಗತಿ, ದ್ವಿತೀಯ ಪಿ.ಯು.ಸಿ., ಅಂತಿಮ ಪದವಿ ಪರೀಕ್ಷೆ, ಡಿಪ್ಲೊಮ ಮತ್ತು ಕೊನೆಯ ಇಂಜಿನಿಯರಿAಗ್ ಪರೀಕ್ಷೆ, ವೈದ್ಯಕೀಯ ಪದವೀಧರರಿಗೂ ಉತ್ತಮ ಅಂಕಗಳಿಸಿರುವAತಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಬಹುಮಾನವನ್ನು ಕಳೆದ 15 ವರ್ಷಗಳಿಂದಲೂ ನೀಡಲಾಗುತ್ತಿದೆ.

ಸದಸ್ಯರ ಮಕ್ಕಳು ರಾಷ್ಟ್ರಮಟ್ಟದಲ್ಲಿ, ರಾಜ್ಯಮಟ್ಟದಲ್ಲಿ ಸ್ಪರ್ಧಿಸಿರುವ ಕ್ರೀಡಾಸ್ಪರ್ಧಿಗಳಿಗೆ ಬಹುಮಾನ ವ್ಯವಸ್ಥೆ ಮಾಡಲಾಗಿದೆ. ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಸೆ. 7ರಂದು ಭಾನುವಾರ ಪೂರ್ವಾಹ್ನ 11.00 ಗಂಟೆಗೆ ಸಂಘದ ಅಧ್ಯಕ್ಷ ಟಿ. ಆರ್. ಶರವಣಕುಮಾರ್ ಅಧ್ಯಕ್ಷತೆಯಲ್ಲಿ ಗಾಯಿತ್ರಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆಯಲಿದೆ ಎಂದರು.

ಉಪಾಧ್ಯಕ್ಷೆ ನೇತ್ರಾವತಿ, ನಿರ್ದೇಶಕರಾದ ವಿ.ಎಸ್. ಅನಂದ್ ಕುಮಾರ್, ಯತೀಶ್, ಎಂ.ವಿ. ರಾಜೇಶ್, ಎಂ.ಎA. ಚರಣ್, ಕೆ.ಎನ್.ದೇವರಾಜ್, ಬಿ. ರಾಮಕೃಷ್ಣ, ಕವಿತಾ, ಎಚ್.ಎಂ. ಮಧುಸೂದನ್, ಮಹಮ್ಮದ್ ಇಬ್ರಾಹಿಂ, ಪ್ರಸನ್ನ, ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net