ಮಹಾತ್ಮರ ಚಿಂತನೆಗಳಿಂದ ಸಮಾಜ ನಿರ್ಮಾಣ ಸಾಧ್ಯ

Society can be built through the thoughts of great people.
ಅಮೀನಗಡದಲ್ಲಿ ಜರುಗಿದ ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಲಾಳಸಂಗಿಯ ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳು, ಕೈಲಾಸಲಿಂಗ ಶಿವಾಚಾರ್ಯರು, ಸಂತೋಷ ಕುಮಾರ, ಷಣ್ಮುಖಯ್ಯ ವಸ್ತ್ರದ ಮತ್ತಿತರರಿದ್ದಾರೆ.
Published on

ಅಮೀನಗಡ : ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹಾತ್ಮರ ಚಿಂತನೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದು ಲಾಳಸಂಗಿಯ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಪ್ರಭುಶಂಕರೇಶ್ವರ ಅನುಭವ ಮಂಟಪದಲ್ಲಿ ಮಹೇಶ್ವರ ಸಮಾಜದ ಧಾರ್ಮಿಕ, ಶೈಕ್ಷಣಿಕ ಹಾಗೂ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಬುಧವಾರ ಆಯೋಜಿಸಿದ್ದ ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಮಕ್ಕಳಿಗೆ ರೇಣುಕಾಚಾರ್ಯರ ತತ್ವ ಸಿದ್ಧಾಂತಗಳನ್ನು ತಿಳಿಸಿ, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಹೇಳಬೇಕು. ಸರ್ಕಾರ ಜಂಗಮ ಸಮಾಜದ ವಿದ್ಯಾರ್ಥಿಗಳಿಗೆ ಮತ್ತು ಸಮುದಾಯಕ್ಕೆ ವಿಶೇಷ ಸೌಲಭ್ಯ ನೀಡಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಸಂಘಟನೆ ಮುಖ್ಯವಾಗಿದೆ ಎಂದರು.

ಪುರಗಿರಿ ಹಿರೇಮಠದ ಅಭಿನವ ಕೈಲಾಸಲಿಂಗ ಶಿವಾಚಾರ್ಯರು ಸಾನ್ನಿಧ್ಯವಹಿಸಿ ಮಾತನಾಡಿ, ಎಲ್ಲರನ್ನು ಸಮಾನತೆಯಿಂದ ಕಾಣುವ, ಸಮನ್ವಯ ತತ್ವದ ಮೂಲಕ ಜಗತ್ತಿಗೆ ವಿಶ್ವ ಬಂಧುತ್ವ ಸಾರಿದವರು ರೇಣುಕಾಚಾರ್ಯರು. ಅವರು ವೀರಶೈವ ಧರ್ಮವನ್ನು ಸ್ಥಾಪಿಸಿದರೆ, ಅದನ್ನು ಬಸವಣ್ಣನವರು ಮುನ್ನಡೆಸಿದರು ಎಂದರು.

ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಯೋಜನಾಧಿಕಾರಿ ಸಂತೋಷ ಕುಮಾರ ಮಾತನಾಡಿದರು. ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಜರಗಿತು.

ಬೆಳಗ್ಗೆ ಪ್ರಭುರಾಜೇಂದ್ರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನಂತರ ರೇಣುಕಾಚಾರ್ಯರ ಭಾವಚಿತ್ರ ಹಾಗೂ ಕುಂಭಮೇಳ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯ ಮೇಳಗಳೊಂದಿಗೆ ಸಂಭ್ರಮದಿಂದ ಜರುಗಿತು.

ಮಹೇಶ್ವರ ಸಮಾಜದ ಅಧ್ಯಕ್ಷ ಷಣ್ಮುಖಯ್ಯ ವಸ್ತ್ರದ, ಸಲಹಾ ಸಮಿತಿ ಅಧ್ಯಕ್ಷ ಚಂದ್ರಕಾಂತ ಎಸ್. ಚೌಕಿಮಠ, ಸಮಾಜದ ಮುಖಂಡರಾದ ಶಿವಕುಮಾರ ಹಿರೇಮಠ, ವೀರಣ್ಣ ಕಂಬಾಳೆಮಠ, ಗುರುಬಸಯ್ಯ ಹಿರೇಮಠ, ಶಾಂತಕುಮಾರ ಹಿರೇಮಠ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net