ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನ ಸಲ್ಲ

8mnv01
Published on

ಮಾನ್ವಿ: ಉತ್ತರ ಪ್ರದೇಶದ ಗಾಜಿಯಬಾದ್‌ನಲ್ಲಿ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಯತಿ ನರಸಿಂಗಾನಂದ ಸರಸ್ವತಿ, ಪ್ರವಾದಿ ಮುಹಮ್ಮದ್ (ಸ) ಅವರನ್ನು ನಿಂದಿಸಿದ್ದಾರೆ ಎಂದು ತಾಲೂಕು ಮುಸ್ಲಿಂ ಸಮಾಜ ಸಮಿತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಟಿಪ್ಪುಸುಲ್ತಾನ್ ವೃತ್ತದಿಂದ ತಹಸಿಲ್ ಕಚೇರಿವರೆಗೆ ಮೆರವಣಿಗೆ ನಡೆಸಿ ರಾಷ್ಟ್ರಪತಿಗೆ ಬರೆದ ಮನವಿಪತ್ರವನ್ನು ತಹಸೀಲ್ದಾರ್ ರಾಜು ಪಿರಂಗಿಗೆ ಸಲ್ಲಿಸಲಾಯಿತು. ಪ್ರವಾದಿ ಮುಹಮ್ಮದ್ (ಸ) ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದು ಸರಿಯಲ್ಲ. ಇದರಿಂದ ಮುಸ್ಲಿಮರಿಗೆ ನೋವಾಗಿದೆ. ಸಮಾಜದಲ್ಲಿ ಅಶಾಂತಿ ಹಾಗೂ ಕೋಮು ಸೌಹಾರ್ದಕ್ಕೆ ಭಂಗ ಉಂಟು ಮಾಡುತ್ತಿರುವ ಯತಿ ನರಸಿಂಗಾನಂದ ಸರಸ್ವತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net