ಸಮಾಜ ಅಭಿವೃದ್ಧಿಯಲ್ಲಿ ಮಹಿಳೆ ಪಾತ್ರ ಮುಖ್ಯ

NSS
ಗಂಗಾವತಿ ಕಲ್ಮಠ ಡಿಇಡಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎನ್ನೆಸ್ಸೆಸ್ ಚಟುವಟಿಕೆಗಳಿಗೆ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಮಠದ ಡಾ.ಕೊಟ್ಟೂರುಸ್ವಾಮೀಜಿ ಚಾಲನೆ ನೀಡಿದರು. ಕಾರ್ಯದರ್ಶಿ ಶರಣೇಗೌಡ ಮಾ.ಪಾಟೀಲ್, ಉಪನ್ಯಾಸಕ ನೂರೊಂದಯ್ಯ ಅಣ್ಣಿಗೇರಿ, ಐಟಿಐ ಕಾಲೇಜಿನ ಪ್ರಾಚಾರ್ಯ ಅಣ್ಣಪ್ಪ ಇತರರಿದ್ದರು.
Published on

ಗಂಗಾವತಿ: ಮಹಿಳೆಯರು ನಾಲ್ಕು ಗೋಡೆಗೆ ಸೀಮಿತರಾಗಿದೆ, ಶೈಕ್ಷಣಿಕ ಸಾಧನೆ ಮೂಲಕ ಜವಾಬ್ದಾರಿಯುತ ಪ್ರಜೆಗಳಾಗುವಂತೆ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಮಠದ ಡಾ.ಕೊಟ್ಟೂರು ಸ್ವಾಮೀಜಿ ಸಲಹೆ ನೀಡಿದರು.

ನಗರದ ಕಲ್ಮಠ ಡಿ-ಇಡಿ ಸಭಾಂಗಣದಲ್ಲಿ ಎಸ್‌ಕೆವಿಕೆಎಸ್ ಟ್ರಸ್ಟ್ ಕಲ್ಮಠ ಶಿಕ್ಷಕರ ತರಬೇತಿ ಸಂಸ್ಥೆಯ ಎನ್ನೆಸ್ಸೆಸ್ ಘಟಕದಿಂದ ಶನಿವಾರ ಆಯೋಜಿಸಿದ್ದ ಎನ್ನೆಸ್ಸೆಸ್ ಚಟುವಟಿಕೆಗೆ ಚಾಲನೆ ನೀಡಿ ಮಾತನಾಡಿದರು. ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹು ಮುಖ್ಯ ಎಂದ ಅವರು, ಎನ್ನೆಸ್ಸೆಸ್ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.

ಬಸವನದುರ್ಗ ಸ.ಹಿ.ಪ್ರಾ.ಶಾಲೆ ಮುಖ್ಯಶಿಕ್ಷಕ ಛತ್ರಪ್ಪ ತಂಬೂರಿ ಮಾತನಾಡಿ, ಶಿಕ್ಷಕ ವೃತ್ತಿ ಪವಿತ್ರವಾಗಿದ್ದು, ಕಲಿಕಾರ್ಥಿಗಳು ಭವಿಷ್ಯದ ಪ್ರಜೆಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಪ್ರಾಮಾಣಿಕತೆ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.

ವಿದ್ಯಾರ್ಥಿಗಳಿಗೆ ಎನ್ನೆಸ್ಸೆಸ್ ಚಟುವಟಿಕೆಗಳ ಪ್ರತಿಜ್ಞಾವಿಧಿ ಬೋಧಿಸಲಾಯಿತು. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶರಣೇಗೌಡ ಮಾಲಿ ಪಾಟೀಲ್, ಡಯಟ್ ಪ್ರತಿನಿಧಿ ಮೈತ್ರಾದೇವಿ, ಉಪನ್ಯಾಸಕರಾದ ನೂರೊಂದಯ್ಯಅಣ್ಣಿಗೇರಿ, ಐಟಿಐ ಕಾಲೇಜಿನ ಪ್ರಾಚಾರ್ಯ ಅಣ್ಣಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net