ಛಾಯಾಗ್ರಾಹಕರಲ್ಲಿ ಸಮಾಜಮುಖಿ ಆಲೋಚನೆ

1
Published on

ಮೈಸೂರು: ಪತ್ರಿಕಾ ಛಾಯಾಗ್ರಾಹಕರ ಚಿತ್ರಗಳು ಜನರ ಮನಸ್ಸು ಬದಲಿಸುವಲ್ಲಿ ಪ್ರಭಾವಶಾಲಿ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ಫೋಟೊ ಜರ್ನಲಿಸ್ಟ್ ಅಸೋಸಿಯೇಷನ್ ಹೊರ ತಂದಿರುವ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು.

ಸಮಾಜಮುಖಿ ಆಲೋಚನೆಯೊಂದಿಗೆ ಚಿತ್ರ ತೆಗೆಯಲಾಗುತ್ತದೆ. ಅಸಾಧಾರಣ ಶಕ್ತಿ ಮೂಲಕ ವಿಷಯ, ಸಮಸ್ಯೆ ಗುರುತಿಸಿ, ಚಿತ್ರಗಳ ಮೂಲಕವೇ ಪರಿವರ್ತನೆ ತರಲು ಶ್ರಮಿಸುವುದು ಶ್ಲಾಘನೀಯ ಎಂದರು.

ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಡೈರಿ ಹಾಗೂ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಎಸ್.ತಿಪ್ಪೇಸ್ವಾಮಿ, ಹಿರಿಯ ಪತ್ರಕರ್ತ ಬಿ.ಎಸ್.ಪ್ರಭುರಾಜನ್, ಅಸೋಸಿಯೇಷನ್ ಅಧ್ಯಕ್ಷ ಪ್ರಗತಿ ಗೋಪಾಲಕೃಷ್ಣ, ಪ್ರಧಾನ ಕಾರ್ಯದರ್ಶಿ ಎಂ.ಎನ್.ಲಕ್ಷ್ಮೀನಾರಾಯಣ ಯಾದವ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net