ಸಹಕಾರಿ ಸಂಘದ ಅಧ್ಯಕ್ಷ ಜಿ.ಬಿ.ಭಟ್ ನೆಲೆಮಾವು ಆತ್ಮಹತ್ಯೆ

Ganapathi Balgangadar Bhat Nelemav)
Published on

ಸಿದ್ದಾಪುರ: ತಾಲೂಕಿನ ನೆಲೆಮಾವು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಿ.ಬಿ.ಭಟ್ ನೆಲೆಮಾವು(64) ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿಕೊಂಡು ತೆರಳಿದ ಅವರು, ಮನೆಯ ಸಮೀಪ ಫಾರ್ಮ್ ಹೌಸ್ ನಲ್ಲಿ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಸಿದ್ದಾಪುರ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಬೆಂಗಳೂರಿನವರೆಗೆ ಸಾಕಷ್ಟು ಹಿರಿಯ ಸರ್ಕಾರಿ ಅಧಿಕಾರಿಗಳ ನಿಕಟ ಸಂಪರ್ಕ ಹೊಂದಿದ್ದ ಅವರು, ಸ್ಥಳೀಯವಾಗಿ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇತ್ತೀಚೆಗೆ ನಡೆದ ಪಿಎಸ್‌ಐ ನೇಮಕಾತಿ ಅಕ್ರಮದ ತನಿಖೆಯ ಸಂದರ್ಭದಲ್ಲಿ ಸಿಐಡಿ ಅಧಿಕಾರಿಗಳು ಅವರ ವಿಚಾರಣೆ ನಡೆಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net