ಗೋವಾಕ್ಕೆ ಹೋಗುತ್ತಿದ್ದ ಸಾಫ್ಟವೇರ್ ಉದ್ಯೋಗಿ ಬೈಕ್‌ನಿಂದ ಬಿದ್ದು ಸಾವು

Bike Accident_2
Published on

ರಾಣೆಬೆನ್ನೂರ: ಬೈಕ್ ಮೇಲೆ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಸಾಫ್ಟವೇರ್ ಉದ್ಯೋಗಿಯೊಬ್ಬ ಬೈಕ್‌ನಿಂದ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಕಾಕೋಳ ಗ್ರಾಮದ ಬಳಿ ಮಂಗಳವಾರ ನಡೆದಿದೆ.
ಬೆಂಗಳೂರಿನ ಆರ್.ಆರ್. ನಗರದ 6ನೇ ಮೇನ್ 5ನೇ ಸ್ಟೇಜ್‌ನ ನಿವಾಸಿ ಶುಭಾಂಕರ ರಮೇಶರಾವ್ ಜಾಧವ (28) ಮೃತ ದುರ್ದೈವಿ.
ಈತ ಗೋವಾಕ್ಕೆ ಪ್ರವಾಸಕ್ಕಾಗಿ ತನ್ನ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಬೆಂಗಳೂರಿನಿಂದ ತೆರಳುತ್ತಿದ್ದರು. ಈ ಸಮಯದಲ್ಲಿ ಕಾಕೋಳ ಗ್ರಾಮದ ಬಳಿ ಬೈಕ್ ರಸ್ತೆ ಪಕ್ಕದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net