ವಿದ್ಯುತ್ ಬರ ನೀಗಿ ಬೇರೆ ರಾಜ್ಯಗಳಿಗೂ ಸರಬರಾಜು ಮಾಡುವ ಸಾಮರ್ಥ್ಯ ನಮ್ಮ ರಾಜ್ಯಕ್ಕಿದೆ

SSIT_Parmeshwar
Published on

ತುಮಕೂರು: ಪವನ ಶಕ್ತಿ, ಸೌರಶಕ್ತಿ ಹಾಗೂ ಜಲವಿದ್ಯುತ್ ಉತ್ವಾದನೆಯಲ್ಲಿ ಕ್ರಾಂತಿಕಾರ ಪ್ರಗತಿ ಸಾಧಿಸಿರುವುದರಿಂದ ಗ್ರಾಮೀಣ ಪ್ರದೇಶ ಸೇರಿದಂತೆ ಕೈಗಾರಿಕೆ, ಕೃಷಿ ಕ್ಷೇತ್ರಕ್ಕೆ ಸರಬರಾಜು ಮಾಡಲಾಗುತ್ತಿರುವ ವಿದ್ಯುತ್ ಪೂರೈಕೆಯಲ್ಲಿ ಹೆಚ್ಚಿನ ವ್ಯತ್ಯಯ ಕಂಡುಬರುತ್ತಿಲ್ಲ ಎಂದು ಮಾಜಿ ಡಿಸಿಎಂ ಹಾಗೂ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಜಿ.ಪರಮೇಶ್ವರ್ ಹೇಳಿದರು.

ಇಂದು ನಗರದ ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್ ವಿಭಾಗ ವತಿಯಿಂದ ಆರಂಭಿಸಿರುವ ವಿಜಿಎಸ್‌ಟಿ ಪ್ರಾಯೋಜಿತ ಸಂಶೋಧನಾ ಪ್ರಯೋಗಾಲಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ 20 ವರ್ಷದ ಹಿಂದೆ ರಾಜ್ಯದಲ್ಲಿ ಅತೀವವಾದ ವಿದ್ಯುತ್ ಕ್ಷಾಮ ತಲೋದೋರಿತ್ತು. ಆದರೆ, ಈಗ ರಾಜ್ಯದಲ್ಲಿ 15 ಸಾವಿರ ಮೆಗಾ ವ್ಯಾಟ್ ನಷ್ಟು ವಿದ್ಯುತ್ ಉತ್ವಾದನೆಯಾಗುತ್ತಿದ್ದು, 12 ಸಾವಿರ ಮೆಗಾ ವ್ಯಾಟ್ ಬಳಕೆಯಾಗುತ್ತಿದ್ದು, ಇತರೆ ರಾಜ್ಯಗಳಿಗೆ ಪೂರೈಕೆ ಮಾಡುವ ಸಾವರ್ಥ್ಯ ಬೆಳೆಸಿಕೊಂಡಿದ್ದೇವೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನಾ ಆಯೋಗಗಳು ವಿದ್ಯುತ್ ಉತ್ಪಾದನೆಗೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ಬಜೆಟ್ ನಲ್ಲಿ ಹೆಚ್ಚಿನ ಹಣಕಾಸು ನೆರವು ನೀಡದ್ದರಿಂದ ಇದೆಲ್ಲಾ ಸಾಧ್ಯವಾಯಿತು. ಕೈಗಾರಿಕೆ, ಕೃಷಿವಲಯ ಸೇರಿದಂತೆ ಅಗತ್ಯ ವಲಯಗಳಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಿದ್ದರಿಂದ ಉತ್ಪಾದನೆ ಹೆಚ್ಚಾಗಿದೆ. ರಾಜ್ಯ ಹಾಗೂ ದೇಶದ ಆರ್ಥಿಕ ಸುಧಾರಣೆಗೆ ಸಹಕಾರಿಯಾಗುತ್ತಿದೆ ಎಂದು ತಿಳಿಸಿದರು.

ಸಾಹೇ ಕುಲಸಚಿವ ಡಾ. ಎಮ್.ಝೆಡ್.ಕುರಿಯನ್, ಪರೀಕ್ಷಾಂಗ ಕುಲಸಚಿವ ಡಾ. ಕರುಣಾಕರ್, ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ರವಿಪ್ರಕಾಶ್, ಸಾಹೇಡೀನ್ ಡಾ.ಸಿದ್ದಪ್ಪ, ಡಾ.ಅಶೋಕ್ ಮೆಹ್ತಾ, ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ನಂಜುಂಡಪ್ಪ , ಡಾ. ಸಂಜೀವ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net