

ಮಮದಾಪುರ: ಗೋಕಾಕ ತಾಲೂಕಿನ ಬೆಣಚಿನಮರಡಿ (ಉರುಬಿನ ಹಟ್ಟಿ) ಗ್ರಾಮದ ಯೋಧ ವಿಠ್ಠಲ ಮಲ್ಲಪ್ಪ ಶಿಂತ್ರೆ (29) ಶುಕ್ರವಾರ ರಾತ್ರಿ ಮಲೆಬೈಲ್ ಕ್ರಾಸ್ ಹತ್ತಿರ (ಗೊಡಚಿನಮಲ್ಕಿ) ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರರಿಗೆ ತಂದೆ&ತಾಯಿ, ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.
ಮಲ್ಲಪ್ಪ ಯೋಧ ಪಂಜಾಬನಲ್ಲಿ ಸೇವೆ ಸಲ್ಲಿಸುತ್ತಿದ್ದು ಮೂರು ದಿನಗಳ ಹಿಂದೆ ರಜೆ ಮೇಲೆ ಸ್ವಗ್ರಾಮಕ್ಕೆ ಆಗಮಿಸಿದ್ದರು. ಶುಕ್ರವಾರ ಗೋಕಾಕ ಗ್ರಾಮದೇವಿಯರ ಜಾತ್ರಾ ಮಹೋತ್ಸವಕ್ಕೆ ಹೋಗಿ ಸ್ವಗ್ರಾಮಕ್ಕೆ ಬರುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಟನೆ ಸಂಭವಿಸಿದೆ ಪ್ರಕರಣ ದಾಖಲಿಸಿಕೊಂಡಿರುವ ಗೋಕಾಕ ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.
ಶನಿವಾರ ಸ್ವಗ್ರಾಮದಲ್ಲಿ ಸಕಲ ಮಿಲಿಟರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ ನೆರವೇರಿತು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಂತ್ಯಕ್ರಿಯೆಯಲ್ಲಿ ಗ್ರಾಮದ ಮುಖಂಡರು, ಗುರು ಹಿರಿಯರು ಹಾಗೂ ಮಾಜಿ ಸೈನಿಕರು ಪಾಲ್ಗೊಂಡಿದ್ದರು.