ಸಕಲ ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ

Soldier's funeral with full state honors
ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಯೋಧ ಶ್ರೀಶೈಲ ಹೀರೋಡಗಿ ಪಾರ್ಥಿವ ಶರೀರಕ್ಕೆ ಸಚಿವ ಶಿವಾನಂದ ಪಾಟೀಲ ಗೌರವ ಸಲ್ಲಿಸಿದರು. ಗ್ರಾಪಂ ಅಧ್ಯಕ್ಷ ನಿಂಗೊಂಡ ಸಿಂದಗಿ, ಮುಖಂಡರಾದ ಅಣ್ಣಾಸಾಹೇಬಗೌಡ ಪಾಟೀಲ ಇತರರಿದ್ದರು.
Published on

ಬಸವನಬಾಗೇವಾಡಿ: ದೆಹಲಿಯಲ್ಲಿ ಗುರುವಾರ ಹೃದಯಾಘಾತದಿಂದ ವೀರ ಮರಣ ಹೊಂದಿದ್ದ ಯೋಧ ಶ್ರೀಶೈಲ ಯಮನಪ್ಪ ಹೀರೋಡಗಿ (54) ಅವರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ತಾಲೂಕಿನ ಸ್ವಗ್ರಾಮ ಉಕ್ಕಲಿ ಗ್ರಾಮದ ಬಸ್ ನಿಲ್ದಾಣ ಮುಂಭಾಗದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕುಟುಂಬಸ್ಥರ ಹಾಗೂ ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಗ್ರಾಮದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

1990ರ ಡಿಸೆಂಬರ್‌ನಲ್ಲಿ ಭಾರತೀಯ ಸೇನೆಗೆ ಸೆರ್ಪಡೆಗೊಂಡಿದ್ದ ಯೋಧ ಶ್ರೀಶೈಲ ಅವರು ಹೈದರಾಬಾದ್, ಜಮ್ಮು ಮತ್ತು ಕಾಶ್ಮೀರ, ಪಂಜಾಬ, ಆಸಾಂ, ತ್ರಿಪುರ, ಮಣಿಪುರದಲ್ಲಿ 34 ವರ್ಷ ಸಿ.ಆರ್.ಪಿ.ಎಪ್. ಹವಾಲ್ದಾರರಾಗಿ ಸೇವೆ ಸಲ್ಲಿಸಿದ್ದಾರೆ. ಸದ್ಯ ದೆಹಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆ ಹೃದಯಾಘಾತದಿಂದ ವೀರ ಮರಣ ಹೊಂದಿದ್ದಾರೆ ಎನ್ನಲಾಗುತ್ತಿದೆ.

ಯೋಧನಿಗೆ ಪತ್ನಿ, ಪುತ್ರಿ, ಇಬ್ಬರು ಪುತ್ರರು ಇದ್ದಾರೆ. ಶವಪಟ್ಟಿಗೆ ಮೇಲೆ ರಾಷ್ಟ್ರಧ್ವಜ ಹೊದಿಸಿ ನಮನ ಸಲ್ಲಿಸಲಾಯಿತು. ಬಳಿಕ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ಗೌರವ ಸಲ್ಲಿಸಲಾಯಿತು.

ಯೋಧನ ಅಂತಿಮ ಸಂಸ್ಕಾರದಲ್ಲಿ ಗ್ರಾಪಂ ಅಧ್ಯಕ್ಷ ನಿಂಗೊಂಡ ಸಿಂದಗಿ, ಮುಖಂಡರಾದ ಅಣ್ಣಾಸಾಹೇಬಗೌಡ ಪಾಟೀಲ, ಚಂದ್ರಶೇಖರಗೌಡ ಪಾಟೀಲ, ವಿಶ್ವನಾಥಗೌಡ ಪಾಟೀಲ, ಉಮೇಶ ಕಾರಜೋಳ, ಮನಗೂಳಿ ಪಪಂ ಅಧ್ಯಕ್ಷ ಡಾ. ಎಂ.ಡಿ. ಮೇತ್ರಿ, ಸಚಿವರ ಸಹೋದರ ಶಿವಶರಣಗೌಡ ಪಾಟೀಲ, ಭಾಗ್ಯಶ್ರೀ ಶಿವಾನಂದ ಪಾಟೀಲ, ಬಿಜೆಪಿ ಮುಖಂಡ ಉಮೇಶ ಕಾರಜೋಳ, ತಹಸೀಲ್ದಾರ್ ಯಮನಪ್ಪ ಸೋಮನಕಟ್ಟಿ, ತಾ.ಪಂ. ಇಒ ಪ್ರಕಾಶ ದೇಸಾಯಿ, ಮನಗೂಳಿ ಪಪಂ ಮುಖ್ಯಾಧಿಕಾರಿ ಶಬ್ಬೀರ್ ರೇವುರಕರ, ರಾಹುಲ್ ಕುಲಗೋಡ, ಬಿಜೆಪಿ ಮಂಡಲ ಅಧ್ಯಕ್ಷ ಸಿದ್ರಾಮ ಕಾಖಂಡಕಿ, ಮನಗೂಳಿ ಪಿ.ಎಸ್.ಐ ಶ್ರೀಕಾಂತ ಕಾಂಬಳೆ ಪಾಲ್ಗೊಂಡಿದ್ದರು.

ಸಂತಾಪ: ಯೋಧ ಶ್ರೀಶೈಲ ಅವರ ನಿಧನದ ಸುದ್ದಿ ತಿಳಿದು ಸಚಿವ ಶಿವಾನಂದ ಪಾಟೀಲ ಆಗಮಿಸಿ ಅಂತ್ಯಕ್ರಿಯೆಲ್ಲಿ ಪಾಲ್ಗೊಂಡು ಮಾತನಾಡಿ, ಯೋಧನ ಸಾವಿನಿಂದ ನೋವು ಉಂಟಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net