ಹುತಾತ್ಮ ಯೋಧರಿಗೆ ಗೌರವ ಸಲ್ಲಿಸುವುದು ಕರ್ತವ್ಯ

web 3
Published on

ಚಿಕ್ಕಮಗಳೂರು: ದೇಶದ ಜನರ ರಕ್ಷಣೆಗಾಗಿ ದಿನವಿಡೀ ಗಡಿಯಲ್ಲಿ ಸೇವೆ ಸಲ್ಲಿಸಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಬೇಕಾದುದು ಎಲ್ಲರ ಕರ್ತವ್ಯ ಎಂದು ಎಎಸ್ಪಿ ಶ್ರುತಿ ಹೇಳಿದರು.

ನಗರದ ಆಜಾದ್ ವೃತ್ತದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಹುತಾತ್ಮ ಪೊಲೀಸರ ಸ್ಮರಣಾರ್ಥ ಪೊಲೀಸ್ ವಾದ್ಯಮೇಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವೆಲ್ಲ ನೆಮ್ಮದಿಯಿಂದ ಕುಟುಂಬದೊಂದಿಗೆ ಸಂತೋಷವಾಗಿ ಕಾಲ ಕಳೆಯುತ್ತಿದ್ದೇವೆಂದರೆ ಯೋಧರ ಸೇವೆ ಕಾರಣ. ಪ್ರತಿ ವರ್ಷ ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಯೋಧರ ಸ್ಮರಣಾರ್ಥ ಗೌರವ ನಮನ ಸಲ್ಲಿಸುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಪೊಲೀಸರು 24 ಗಂಟೆ ಕರ್ತವ್ಯದಲ್ಲಿರುವುದರಿಂದ ಜನ ನೆಮ್ಮದಿಯಾಗಿ ನಿದ್ರೆ ಮಾಡುತ್ತಿದ್ದೀರಿ ಎಂದು ಹೇಳಿದರು.

ಆರ್​ಪಿಐ ಪ್ರದೀಪ್​ಕುಮಾರ್ ಮಾತನಾಡಿ, ಕರೊನಾ ಹರಡದಂತೆ ತಡೆಗಟ್ಟಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಿಕೊಂಡು ಓಡಾಡಬೇಕು. ಪೊಲೀಸರು ಜನ ಸ್ನೇಹಿಯಾಗಿರುತ್ತಾರೆ. ಅದೇ ರೀತಿ ಪೊಲೀಸರಿಗೆ ನಾಗರಿಕರ ಸಹಕಾರವೂ ಅಗತ್ಯ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net