ಘನತ್ಯಾಜ್ಯ ನಿರ್ವಹಣಾ ಮಂಡಳಿ ಸ್ಥಾಪನೆ: ವಾರದೊಳಗೆ ಪ್ರಸ್ತಾವನೆ ಸಲ್ಲಿಕೆ

bbmp
Published on

ಬೆಂಗಳೂರು: ನಗರದಲ್ಲಿ ಘನತ್ಯಾಜ್ಯ ನಿರ್ವಹಣಾ ಮಂಡಳಿ ಸ್ಥಾಪನೆ ಕುರಿತು ತ್ಯಾಜ್ಯ ಉತ್ಪಾದನೆ, ವೆಚ್ಚ, ಆದಾಯ ಸೇರಿ ವಿವರವಾದ ಪ್ರಸ್ತಾವನಾ ವರದಿ ಸಿದ್ಧಪಡಿಸಲಾಗುತ್ತಿದ್ದು, ವಾರದೊಳಗೆ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ನಗರದಲ್ಲಿ ತ್ಯಾಜ್ಯ ಉತ್ಪಾದನೆ ಪ್ರಮಾಣ ಹೆಚ್ಚಾಗುತ್ತಿದ್ದು, ಸಮರ್ಪಕ ನಿರ್ವಹಣೆಗೆ ಪ್ರತ್ಯೇಕ ಘನತ್ಯಾಜ್ಯ ನಿರ್ವಹಣಾ ಮಂಡಳಿ ಅಗತ್ಯವಿದೆ. ಹೀಗಾಗಿ, ಉತ್ಪಾದನೆ ಅಗುತ್ತಿರುವ ತ್ಯಾಜ್ಯದ ಪ್ರಮಾಣ, ನಿರ್ವಹಣೆಗೆ ಮಾಡುತ್ತಿರುವ ವೆಚ್ಚ, ಪಾಲಿಕೆಗೆ ಬರುತ್ತಿರುವ ಆದಾಯ ಹಾಗೂ ಸಂಸ್ಕರಣಾ ಘಟಕಗಳು ನಿರ್ವಹಣೆ ಸೇರಿ ವಿವರವಾದ ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದೆ. ಈ ಪ್ರಸ್ತಾವನಾ ವರದಿಗೆ ಆಡಳಿತಾಧಿಕಾರಿ ಒಪ್ಪಿಗೆ ಪಡೆದು ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net