ಕ್ರೀಡಾಕೂಟದಿಂದ ಸಮಾಜದಲ್ಲಿ ಒಗ್ಗಟ್ಟು: ಎಂ.ಕೆ ಪ್ರಸಾದ್ ಅಭಿಪ್ರಾಯ

Bel_sports
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಸಮಾಜದ ಒಗ್ಗೂಡುವಿಕೆಗೆ ಕ್ರೀಡಾಕೂಟ ಅಗತ್ಯವಿದ್ದು, ದೈಹಿಕ ಮಾನಸಿಕ ನೆಮ್ಮದಿಗೂ ಕ್ರೀಡೆ ಸಹಕಾರಿ. ಬಿಲ್ಲವ ಸಮಾಜದ ಇತಿಹಾಸದಲ್ಲಿ ಕ್ರೀಡೆಗೆ ಮಹತ್ವದ ನಿದರ್ಶನಗಳಿದ್ದು, ಯುವ ಪೀಳಿಗೆ ಮುಂದುವರಿಸುವ ಅಗತ್ಯವಿದೆ ಎಂದು ಬೆಳ್ತಂಗಡಿ ತಾಲೂಕು ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ.ಪ್ರಸಾದ್ ಹೇಳಿದರು.

ಬಳಂಜ ಬಿಲ್ಲವ ಸಂಘದ ವಠಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ನಾಲ್ಕೂರು, ತೆಂಕಕಾರಂದೂರು ಸಹಕಾರದೊಂದಿಗೆ ಯುವ ಬಿಲ್ಲವ ವೇದಿಕೆ ನೇತೃತ್ವದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿರಿಯ ಕಂಬಳ ಒಟಗಾರ ಸದಾನಂದ ಪೂಜಾರಿ ಅಂತರ ಉದ್ಘಾಟಿಸಿದರು. ಬಳಂಜ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಯುವವಾಹಿನಿ ಘಟಕ ಅಧ್ಯಕ್ಷ ಗುರುರಾಜ್ ಗುರುಪಳ್ಳ, ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ಶಾಂತಾ ಬಂಗೇರ ಮಾತನಾಡಿದರು.

ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ, ಪತ್ರಕರ್ತ ಮನೋಹರ್ ಬಳಂಜ, ಬಳಂಜ ಗುರುನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್, ಗೌರವ ಅಧ್ಯಕ್ಷ ಎಚ್.ದರ್ಣಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಜಗದೀಶ್ ಪೂಜಾರಿ ಬಳ್ಳಿದಡ್ಡ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್, ಪ್ರಧಾನ ಕಾರ್ಯದರ್ಶಿ ಅಶ್ವಿತಾ ಸಂತೋಷ್, ಯುವ ಬಿಲ್ಲವ ವೇದಿಕೆ ಪ್ರಧಾನ ಕಾರ್ಯದರ್ಶಿ ಲತೇಸ್ ಪೆರಾಜೆ ಉಪಸ್ಥಿತರಿದ್ದರು. ಸಂತೋಷ್ ಪಿ.ಕೋಟ್ಯಾನ್ ಸ್ವಾಗತಿಸಿದರು. ವಿಶಾಲ ಜಗದೀಶ್ ವಂದಿಸಿದರು. ಸಾಹಿತಿ ಚಂದ್ರಹಾಸ್ ಬಳಂಜ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net