ಸೋಲೇ ಗೆಲುವಿನ ಮೆಟ್ಟಿಲು

H27-IMSR
Published on

ಹುಬ್ಬಳ್ಳಿ: ನಗರದ ಕೆಎಲ್‌ಇ ಸಂಸ್ಥೆಯ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೆಜ್ಮೆಂಟ್ ಸ್ಟಡೀಸ್ ಆ್ಯಂಡ್ ರಿಸರ್ಚ್ (ಐಎಂಎಸ್‌ಆರ್) ಮಹಾವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ರಾಜ್ಯಮಟ್ಟದ ಮ್ಯಾನೆಜ್ಮೆಂಟ್ ಫೆಸ್ಟ್ -2024 ಏರ್ಪಡಿಸಲಾಗಿತ್ತು.
ಹೆಸ್ಕಾಂನ ಪ್ರಧಾನ ವ್ಯವಸ್ಥಾಪಕ ಡಾ. ಸಿದ್ದು ಹುಲ್ಲೋಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರೂ ಗುರಿ ಸಹಿತ ಶ್ರಮ, ಶ್ರದ್ಧೆ ಇಟ್ಟುಕೊಳ್ಳಬೇಕು. ಇದರಿಂದ ಯಶಸ್ಸು ಸುಗಮವಾಗಲಿದೆ ಎಂದರು.
ಸಂಸ್ಥೆಯ ನಿರ್ದೇಶಕ ಡಾ. ರಾಜೇಂದ್ರ ಪ್ರಸಾದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೋಲೇ ಗೆಲುವಿನ ಮೆಟ್ಟಿಲು. ಆದ್ದರಿಂದ ಸೋಲು-ಗೆಲುವಿನ ಬಗ್ಗೆ ಚಿಂತಿಸದೇ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಹುಬ್ಬಳ್ಳಿಯ ಕುಮಾರ ಮೋಟರ್ಸ್‌ನ ಮಾರಾಟ ವಿಭಾಗದ ಮುಖ್ಯಸ್ಥ ಯಶವಂತ ಶಾನಭಾಗ, ಕಾರ್ಯಕ್ರಮದ ಸಂಚಾಲಕ ಪ್ರೊ. ಅರುಣಕುಮಾರ ಶೆಟ್ಟಿ, ಡಾ.ಅಮಿತ್ ಅಂಗಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net