

ಕೊಳ್ಳೇಗಾಲ: ಬಿ ಖಾತೆ ವಿತರಣೆಯಲ್ಲಿ ಕಂದಾಯ ಕಟ್ಟುವ ವಿಚಾರವಾಗಿ ನಗರಸಭೆ ಅಧಿಕಾರಿಗಳು ಗೊಂದಲ ಉಂಟು ಮಾಡುತ್ತಿದ್ದು, ಸಮಸ್ಯೆ ಪರಿಹರಿಸಿಕೊಡುವಂತೆ ಕೊಳ್ಳೇಗಾಲ ಪಟ್ಟಣದ ಸಾರ್ವಜನಿಕರು ಪೌರಾಡಳಿತ ಸಚಿವರಿಗೆ ಪತ್ರ ಬರೆದಿದ್ದಾರೆ.
ಸಾರ್ವಜನಿಕರಿಗೆ ತೊಂದರೆ ಆಗದಂತೆ ನಿಯಮಾನುಸಾರ ಕಂದಾಯ ಪಾವತಿ ಮಾಡಿಕೊಳ್ಳಲು ಸರ್ಕಾರ ಕೊಳ್ಳೇಗಾಲ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡುವುದರ ಮೂಲಕ ಸಮಸ್ಯೆ ಪರಿಹರಿಸಿ ಸಾರ್ವಜನಿಕರಿಗೆ ಬಿ ಖಾತೆ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಪ್ರತಿಯನ್ನು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು, ಕೊಳ್ಳೇಗಾಲ ಶಾಸಕರು, ಚಾಮರಾಜನಗರ ಜಿಲ್ಲಾಧಿಕಾರಿ, ಕೊಳ್ಳೇಗಾಲ ನಗರಸಭೆ ಪೌರಾಯುಕ್ತರಿಗೆ ಸಲ್ಲಿಸಲಾಗಿದೆ.