ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಿ

15-12-Shiva-3
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಎಐಡಿಎಸ್‌ಒದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಸಂಘಟನೆ ಜಿಲ್ಲಾಧ್ಯಕ್ಷ ಹಯ್ಯಳಪ್ಪ, ಪದಾಕಾರಿಗಳಾದ ಬಸವರಾಜ, ಅಮೋಘ, ಸೈಯದ್, ನಿತೀನ್, ವೀರೇಶ ಇದ್ದರು.
Published on

ರಾಯಚೂರು: ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಎಐಡಿಎಸ್‌ಒದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಅತಿಥಿ ಉಪನ್ಯಾಸಕರು ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕಳೆದ ಎರಡು ವಾರಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ತರಗತಿ ನಡೆಯದೆ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ ಎಂದು ದೂರಿದರು.
ರಾಜ್ಯದಲ್ಲಿನ ಸರ್ಕಾರಿ ಪದವಿ ಕಾಲೇಜುಗಳು ಬಹುತೇಕ ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಎರಡು ವಾರದಿಂದ ತರಗತಿಗಳು ಸ್ಥಗಿತಗೊಂಡಿವೆ. ಮತ್ತೊಂದೆಡೆ ಸೆಮಿಸ್ಟರ್ ಪರೀಕ್ಷೆಗಳು ಸಮೀಪಿಸುತ್ತಿದ್ದು, ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ.
ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಶೀಲಿಸಿ ಬೇಡಿಕೆಗಳನ್ನು ಈಡೇರಿಸುವ ಮೂಲಕ ಕಾಲೇಜುಗಳಲ್ಲಿ ತರಗತಿಗಳು ನಡೆಯುವ ನಿಟ್ಟಿನಲ್ಲಿ ಪೂರಕ ವಾತಾವರಣ ನಿರ್ಮಾಣ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಹಯ್ಯಳಪ್ಪ, ಪದಾಕಾರಿಗಳಾದ ಬಸವರಾಜ, ಅಮೋಘ, ಸೈಯದ್, ನಿತೀನ್, ವೀರೇಶ ಹಾಗೂ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net