ಜಾಮರ್ ಸಮಸ್ಯೆ ಪರಿಹರಿಸಿ

ಬಳ್ಳಾರಿ ಕೇಂದ್ರ ಕಾರಾಗೃಹದ ಮುಂದೆ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ, ಜಿಲ್ಲಾಧಕ್ಷ ಅನಿಲ್ ಕುಮಾರ, ಪ್ರಮುಖರಾದ ಕೆ.ಮಲ್ಲೇಶ್, ಪುಷ್ಪಾಲತಾ, ಹನುಮಂತ, ತಿಲಕ್, ಶ್ರೀನಿವಾಸ ಮೋತ್ಕರ್ ಇತರರಿದ್ದರು.

Published on

ಬಳ್ಳಾರಿ: ನಗರದ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಅಳವಡಿಸಿದ ತಂತ್ರಜ್ಞಾನ ಆಧಾರಿತ ಜಾಮರ್ ನಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದ್ದು, ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ ಭಾನುವಾರ ಕೇಂದ್ರ ಕಾರಾಗೃಹದ ಮುಂದೆ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಮಾತನಾಡಿ, ಕೇಂದ್ರ ಕಾರಾಗೃಹದಲ್ಲಿ ಆಳವಡಿಸಿದ ಜಾಮರ್‌ನಿಂದ ಜೈಲಿನ ಸುತ್ತಲಿನ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಖಾಸಗಿ ಬ್ಯಾಂಕ್ ಹಾಗೂ ವಾಣಿಜ್ಯ ವಹಿವಾಟುಗಳಿಗೆ ತೊಂದರೆಯಾಗುತ್ತಿದೆ. ಸಾರ್ವಜನಿಕರ ಯಾವ ಕರೆಗಳು ಸ್ವೀಕರಿಸುತ್ತಿಲ್ಲ. ಡಿಜಿಟಲ್ ವಹಿವಾಟು ನಡೆಯತ್ತಿಲ್ಲ. ಈ ಬಗ್ಗೆ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ಪತ್ರ ಬರೆದರೂ ಕ್ರಮ ಕೈಗೊಂಡಿಲ್ಲ. ಇದರಿಂದ ಸಾರ್ವಜನಿಕರಿಗೆ ಹಾಗೂ ಉದ್ಯಮಿಗಳಿಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಜಾಮರ್ ರೇಂಜ್ ಕಡಿಮೆ ಮಾಡಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಿ. ಸಮಸ್ಯೆೆ ಪರಿಹರಿಸದಿದ್ದಲ್ಲಿ ಬಳ್ಳಾರಿ ಬಂದ್ ಮಾಡಿ. ಉಗ್ರರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net