ಕೈಗಾರಿಕೋದ್ಯಮಿಗಳ ಸಮಸ್ಯೆ ಪರಿಹರಿಸಿ, ಅಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ ದಾಬಸ್‌ಪೇಟೆ ಕೈಗಾರಿಕಾ ಪ್ರದೇಶ ಪರಿಶೀಲನೆ

shattar 2
Published on

ಬೆಂಗಳೂರು ಗ್ರಾಮಾಂತರ: ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕೋದ್ಯಮಿಗಳು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಚಿಸಿದರು.

ದಾಬಸ್‌ಪೇಟೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶ ಹಾಗೂ ಕಾರ್ಖಾನೆಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಕೈಗಾರಿಕೋದ್ಯಮಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕೈಗಾರಿಕೆಗಳಿಗೆ ಭೂಮಿ ನೀಡುವ ಜತೆಗೆ ಅಗತ್ಯವಿರುವ ವಿದ್ಯುತ್, ನೀರು, ಸುರಕ್ಷತೆ ಹಾಗೂ ಇನ್ನಿತರ ಸೌಲಭ್ಯ ಒದಗಿಸುವುದು ಮಂಡಳಿ ಕರ್ತವ್ಯ. ಸೌಲಭ್ಯ ಸಿಕ್ಕಾಗ ಮಾತ್ರ ಕೈಗಾರಿಕೆಗಳು ಉತ್ಪಾದನೆ ಪ್ರಾರಂಭಿಸಿ ಉದ್ಯೋಗಾವಕಾಶ ಹಾಗೂ ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಲು ಸಾಧ್ಯ ಎಂದರು.

ದಾಬಸ್‌ಪೇಟೆಯ ಕೈಗಾರಿಕೋದ್ಯಮಿಗಳು ನೀಡಿರುವ ಬೇಡಿಕೆಗಳನ್ನು ತುರ್ತಾಗಿ ಈಡೇರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ಈ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಭೂಮಿಗೆ ಬೇಡಿಕೆ ಹೆಚ್ಚಿರುವುದರಿಂದ, ಮಂಡಳಿಯಿಂದ ಸ್ವಾಧೀನಪಡಿಸಿಕೊಂಡಿರುವ ಭೂಮಿ ಅಭಿವೃದ್ಧಿಗೊಳಿಸಿ ಹಂಚಿಕೆ ಮಾಡುವ ಕಾರ್ಯ ವೇಗಗೊಳಿಸಬೇಕು ಎಂದರು.

ತ್ರಿವೇಣಿ ಟ್ರಿಬ್ಯೂನ್ ಮತ್ತು ಕೆಬಿಡಿ ಕಲ್ಪತರು ಕಂಪನಿಗಳಿಗೆ ಭೇಟಿ ನೀಡಿ ಕೋವಿಡ್ ತಡೆಗಟ್ಟಲು ಕೈಗೊಂಡಿರುವ ಕ್ರಮಗಳನ್ನು ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net