ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆ ಪರಿಹರಿಸಿ

2 nrp 1 (1)
Published on

ಎನ್.ಆರ್.ಪುರ: ರಾಜ್ಯ ಸರ್ಕಾರ ಗ್ರಾಪಂ ಸದಸ್ಯರ ಸಮಸ್ಯೆಗಳನ್ನು ಪರಿಹಾರ ಮಾಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ರಾಜ್ಯ ಗ್ರಾಪಂ ಸದಸ್ಯರ ಮಹಾ ಒಕ್ಕೂಟದ ಸದಸ್ಯೆ ವಾಣಿ ನರೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಲಾನುಭವಿಗಳಿಗೆ ದೊರಕಿಸಲು ಅಧಿಕಾರಿಗಳೊಂದಿಗೆ ಗ್ರಾಪಂ ಸದಸ್ಯರೂ ಶ್ರಮಿಸುತ್ತಿದ್ದಾರೆ. ಆದರೆ ಕೆಲವು ಗ್ರಾಪಂಗಳಲ್ಲಿ ಪಿಡಿಒ ಹಾಗೂ ಸಿಬ್ಬಂದಿ ಸದಸ್ಯರನ್ನು ಕಡೆಗಣಿಸುತ್ತಿದ್ದಾರೆ. ಅನೇಕ ಸಂದರ್ಭದಲ್ಲಿ ಅಧಿಕಾರಿಗಳ ನಡವಳಿಕೆ ಖಂಡಿಸಿ ಗ್ರಾಪಂ ಎದುರು ಧರಣಿ ಕುಳಿತ ಗ್ರಾಪಂ ಸದಸ್ಯರಿಗೆ ಸುಳ್ಳು ಭರವಸೆ ನೀಡಿ ಸಮಾಧಾನ ಮಾಡಿದ್ದಾರೆ ಹೊರತು ನ್ಯಾಯ ಕೊಡಿಸಿಲ್ಲ ಎಂದು ಹೇಳಿಕೆಯಲ್ಲಿ ದೂರಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜೆ.ವೆಂಕಟಾಪುರ ಗ್ರಾಪಂ ಮಹಿಳಾ ಸದಸ್ಯೆ ಜತೆ ಅಲ್ಲಿನ ಪಿಡಿಒ ಗ್ರಾಪಂ ಸದಸ್ಯೆ ಪ್ರಶ್ನೆಗಳಿಗೆ ಸಾಮಾನ್ಯ ಸಭೆಯಲ್ಲಿ ಸರಿಯಾದ ಉತ್ತರ ನೀಡದೆ ನಿರ್ಲಕ್ಷಿಸಿ ಗೂಂಡಾ ವರ್ತನೆ ತೋರಿರುವುದು ಖಂಡನೀಯ. ಈ ವಿಚಾರವನ್ನು ಗ್ರಾಪಂ ಸದಸ್ಯರ ಮಹಾ ಒಕ್ಕೂಟದಿಂದ ರಾಜ್ಯ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ದೂರು ಸಲ್ಲಿಸಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಪಿಡಿಒ ಮೇಲೆ ಕ್ರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸಮಾಜದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಗ್ರಾಪಂ ಮಹಿಳಾ ಸದಸ್ಯರನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ಲಕ್ಷೃಭಾವದಿಂದ ನೋಡುವುದು ಸರಿಯಲ್ಲ. ಗ್ರಾಪಂ ಮಹಿಳಾ ಸದಸ್ಯರ ರಕ್ಷಣೆಗೆ ಹಾಗೂ ಉತ್ತಮ ಆಡಳಿತಕ್ಕಾಗಿ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net