ಸೋಮಣ್ಣಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ

3
Published on

ಮೈಸೂರು: ಕೇಂದ್ರ ಸಚಿವರಾದ ಬಳಿಕ ಪ್ರಥಮ ಬಾರಿಗೆ ನಗರಕ್ಕೆ ಆಗಮಿಸಿದ ವಿ.ಸೋಮಣ್ಣ ಅವರನ್ನು ಬಿಜೆಪಿ, ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು.
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭಾರಿ ಗಾತ್ರದ ಸೇಬಿನ ಹಾರವನ್ನು ಕ್ರೇನ್ ಸಹಾಯದಿಂದ ಹಾಕಿದ ಅಭಿಮಾನಿಗಳು, ಜಯಘೋಷ ಕೂಗಿದರು.
ಚಾಮುಂಡಿಬೆಟ್ಟಕ್ಕೆ ದಂಪತಿ ಭೇಟಿ: ವಿವಿಧ ಕಾರ್ಯಕ್ರಮಗಳ ನಿಮಿತ್ತ ನಗರಕ್ಕಾಗಮಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು ದಂಪತಿ ಸಹಿತ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸರ್ಕಾರಿ ಅತಿಥಿಗೃಹದಲ್ಲಿ ಆಯೋಜಿಸಿದ್ದ ಉಪಾಹಾರ ಕೂಟದಲ್ಲಿ ಭಾಗವಹಿದರಲ್ಲದೆ, ಅಶೋಕಪುರಂ ಉನ್ನತೀಕರಣಗೊಂಡ ರೈಲ್ವೆ ನಿಲ್ದಾಣ, ಮೈಸೂರು ನಗರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮೈಸೂರು ಭಾಗದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.
ಚಾಮರಾಜಪುರಂನ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕೆಲ ಕಾಲ ಕಾರ್ಯಕರ್ತರು, ಮುಖಂಡರೊಂದಿಗೆ ಮಾತುಕತೆ ನಡೆಸಿ ಅಭಿನಂದನೆ ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net